ಸೋಮವಾರ, ಮೇ 16, 2022
28 °C

ಮೊಕದ್ದಮೆ ಹಿಂದಕ್ಕೆ: ಮುಸ್ಲಿಂ ಮುಖಂಡರ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಮೈಸೂರು, ಹಾಸನ ಮತ್ತು ಶಿವಮೊಗ್ಗದಲ್ಲಿ ನಡೆದ ಕೋಮುಗಲಭೆಗಳಿಗೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯುವಂತೆ ಕಾಂಗ್ರೆಸ್‌ನ ಮುಸ್ಲಿಂ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.



2009ರಲ್ಲಿ ಮೈಸೂರಿನಲ್ಲಿ ನಡೆದ ಕೋಮು ಸಂಘರ್ಷಕ್ಕೆ ಸಂಬಂಧಿಸಿದಂತೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ 439 ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು. 2010ರಲ್ಲಿ ಹಾಸನದಲ್ಲಿ 149 ಮತ್ತು ಶಿವಮೊಗ್ಗದಲ್ಲಿ 130 ಮಂದಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿತ್ತು.



ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಖಮರುಲ್ ಇಸ್ಲಾಂ, ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್, ಸಿ.ಎಂ.ಇಬ್ರಾಹಿಂ, ತನ್ವೀರ್ ಸೇಠ್  ನಿಯೋಗದಲ್ಲಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.