ಶನಿವಾರ, ಮೇ 8, 2021
27 °C

ಮೊದಲು ನೀರು ಕೊಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರದ ಜನರು ಕುಡಿಯುವ ನೀರನ್ನು ಹಣ ಕೊಟ್ಟು ಖರೀದಿಸುತ್ತಿದ್ದಾರೆ. ಒಂದು ಬಿಂದಿಗೆ ನೀರಿಗೆ 3 ರೂ ಬೆಲೆ. ಜನರಿಗೆ ಶಾಶ್ವತ ಕುಡಿಯುವ ನೀರು  ಯೋಜನೆ ರೂಪಿಸುವ ಭರವಸೆಯನ್ನು ರಾಜ್ಯ ಸರ್ಕಾರ, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಮತ್ತು ಜಿಲ್ಲಾ ಆಡಳಿತ ಹೀಗೆ ಎಲ್ಲರೂ ನೀಡಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳು ದೊಡ್ಡಬಳ್ಳಾಪುರದ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ.ಜಿಲ್ಲಾಧಿಕಾರಿಗಳು ಆರು ತಿಂಗಳಿಗೊಮ್ಮೆ ಇಲ್ಲಿಗೆ ಬಂದು ಸಭೆ ಮಾಡಿ ಹೋಗುತ್ತಾರೆ. ಜನರ ಸಮಸ್ಯೆಗಳನ್ನು ಕೇಳುವವರಿಲ್ಲ. ಬೆಂಗಳೂರಿನ ಪಕ್ಕದಲ್ಲೇ ಇರುವ ದೊಡ್ಡಬಳ್ಳಾಪುರದ ಜನರ ಬವಣೆಗಳಿಗೆ ಪರಿಹಾರವೇ ಇಲ್ಲ.ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಬೇಕು. ಮೊದಲು ಜನರಿಗೆ ನೀರು ಕೊಡುವ ಬಗ್ಗೆ ಸರ್ಕಾರ ಯೋಚಿಸಲಿ. ಉಳಿದ ಅಭಿವೃದ್ಧಿ ಆಮೇಲಾಗಲಿ 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.