ಮೊದಲ ಪಂದ್ಯಕ್ಕೆ ಸೆಹ್ವಾಗ್ ಲಭ್ಯ

7

ಮೊದಲ ಪಂದ್ಯಕ್ಕೆ ಸೆಹ್ವಾಗ್ ಲಭ್ಯ

Published:
Updated:

ಜೋಹಾನ್ಸ್‌ಬರ್ಗ್ (ಪಿಟಿಐ): ವೀರೇಂದ್ರ ಸೆಹ್ವಾಗ್ ಅವರು ದೈಹಿಕ ಸಾಮರ್ಥ್ಯ ಮರಳಿ ಪಡೆದಿದ್ದು ಚಾಂಪಿಯನ್ಸ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಪರ ಆಡಲಿದ್ದಾರೆ.ಸೆಂಚೂರಿಯನ್‌ನಲ್ಲಿ ಶನಿವಾರ ನಡೆಯಲಿರುವ ಮೊದಲ ಪಂದ್ಯದಲ್ಲಿ ಡೇರ್‌ಡೆವಿಲ್ಸ್ ತಂಡ ಕೋಲ್ಕತ್ತ ನೈಟ್ ರೈಡರ್ಸ್ ವಿರುದ್ಧ ಪೈಪೋಟಿ ನಡೆಸಲಿದೆ. ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಟ್ವೆಂಟಿ-20 ವಿಶ್ವಕಪ್ ವೇಳೆ `ವೀರೂ~ ಗಾಯಗೊಂಡಿದ್ದರು.ಇದರಿಂದ ಅವರು ಚಾಂಪಿಯನ್ಸ್ ಲೀಗ್ ಟೂರ್ನಿಯ ಮೊದಲ ಕೆಲವು ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನ ಎನಿಸಿತ್ತು. ಆದರೆ ಗುರುವಾರ ನಡೆದ ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಅವರು `ತೇರ್ಗಡೆ~ಯಾದರು.`ಸೆಹ್ವಾಗ್ ಗುರುವಾರ ಕರ್ಕ್ ಎಡ್ವರ್ಡ್ಸ್ ಎದುರು ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾದರು. ಈ ವೇಳೆ ಅವರು ಯಾವುದೇ ಸಮಸ್ಯೆ ಎದುರಿಸಲಿಲ್ಲ. ಮೊದಲ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ~ ಎಂದು ಡೆಲ್ಲಿ ತಂಡದ ಅಧಿಕಾರಿಗಳು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry