ಮೊಬೈಲ್–ಬ್ಯಾಗ್ ನಿಷೇಧ

7

ಮೊಬೈಲ್–ಬ್ಯಾಗ್ ನಿಷೇಧ

Published:
Updated:

ವಿಜಾಪುರ: ಇಲ್ಲಿಯ ಸೈನಿಕ ಶಾಲೆಯಲ್ಲಿ ನಡೆಯಲಿರುವ ರಾಷ್ಟ್ರಪತಿಗಳ ಕಾರ್ಯ ಕ್ರಮಕ್ಕೆ ಪಾಸ್‌ ಇದ್ದವರಿಗೆ ಮಾತ್ರ ಪ್ರವೇಶ. ಮೊಬೈಲ್‌ ಮತ್ತು ಬ್ಯಾಗ್‌ ಗಳನ್ನು ನಿಷೇಧಿಸಲಾಗಿದೆ. ಮಹಿಳೆ ಯರು ವ್ಯಾನಿಟಿ ಬ್ಯಾಗ್‌ಗಳನ್ನೂ ತರುವಂತಿಲ್ಲ.ಸೈನಿಕ ಶಾಲೆಯ ಸುವರ್ಣ ಮಹೋತ್ಸವದ ಸಮಾರೋಪ ಸಮಾ ರಂಭದಲ್ಲಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಪಾಲ್ಗೊಳ್ಳಲಿದ್ದು, ಕಾರ್ಯ ಕ್ರಮದ ಸಿದ್ಧತೆ ಕುರಿತಂತೆ ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪರಿಶೀಲನಾ ಸಭೆ ಯಲ್ಲಿ ಈ ಮಾಹಿತಿ ನೀಡಲಾಯಿತು.ಇದೇ 24ಕ್ಕೆ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯಿಂದ ವಿಜಾಪುರಕ್ಕೆ ಆಗಮಿಸಲಿರುವ ರಾಷ್ಟ್ರಪತಿಗಳು, ಸೈನಿಕ ಶಾಲೆಯ ಆವರಣದಲ್ಲಿ  ₨ 5ಕೋಟಿ  ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ಕ್ರೀಡಾಂಗಣವನ್ನು ಲೋಕಾರ್ಪಣೆ ಗೊಳಿಸುವರು. ತರುವಾಯ ಸೈನಿಕ ಶಾಲೆಯಲ್ಲಿ ನಡೆಯುವ ಸೈನಿಕ ಶಾಲೆ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.ರಾಜ್ಯದ ರಾಜ್ಯಪಾಲ ಹಂಸರಾಜ್ ಭಾರಧ್ವಾಜ್‌, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಅಂತಿಮ ಹಂತದಲ್ಲಿರುವ ರಾಷ್ಟ್ರ ಪತಿಗಳು ಸಂಚರಿಸುವ ಮಾರ್ಗದ ಸ್ವಚ್ಛತೆ,  ವಾಹನ ಸೌಕರ್ಯ,  ರಕ್ಷಣಾ ಕ್ರಮ, ಬೆಂಗಾವಲು ವಾಹನ, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗದಂತೆ ಕ್ರಮ ವಹಿಸುವುದು,  ತಾತ್ಕಾಲಿಕ ವಿಶ್ರಾಂತಿ ಸ್ಥಳದಲ್ಲಿ ಮೂಲ ಸೌಕರ್ಯಗಳ ವ್ಯವಸ್ಥೆ, ದೂರವಾಣಿ ಸಂಪರ್ಕ, ಪೂರ್ಣ ಪ್ರಮಾಣದ ವೈದ್ಯಕೀಯ ಸೌಕರ್ಯ, ಗಣ್ಯ ಮತ್ತು ಅತಿ ಗಣ್ಯರಿಗೆ ಸೂಕ್ತ ವ್ಯವಸ್ಥೆ ಸೇರಿದಂತೆ ವಿವಿಧ ವಿಷಯಗಳ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು. ಅಧಿಕಾರಿಗಳನ್ನು ಉಸ್ತುವಾರಿಗೆ ನಿಯೋಜಿಸಲಾಯಿತು.ಕಾರ್ಯಕ್ರಮದಲ್ಲಿ ಅಧಿಕೃತ ಆಮಂತ್ರಣ ಪತ್ರ ಹೊಂದಿದವರಿಗೆ ಮಾತ್ರ ಪ್ರವೇಶಾವಕಾಶವಿದೆ. ಕಾರ್ಯ ಕ್ರಮದಲ್ಲಿ ಭಾಗವಹಿಸುವ ಆಹ್ವಾನಿತರು ಕಾರ್ಯಕ್ರಮದ ಸ್ಥಳಕ್ಕೆ  ಮೊಬೈಲ್, ಬ್ಯಾಗ್, ವ್ಯಾನಿಟಿ ಬ್ಯಾಗ್ ನಂತಹ ವಸ್ತುಗಳನ್ನು ತರುವ ಹಾಗಿಲ್ಲ. ಆಹ್ವಾನಿ ತರಿಗೆ ಆಸನ ವ್ಯವಸ್ಥೆ, ವೇದಿಕೆಯ ವಿನ್ಯಾಸ ಇತರ ಸಿದ್ಧತೆಗಳ ಕುರಿತಂತೆ  ಚರ್ಚಿಸಲಾಯಿತು. ಕಾರ್ಯಕ್ರಮದ ಯಶಸ್ವಿಗೆ ಶಿಸ್ತುಬದ್ಧವಾಗಿ ಎಲ್ಲ ಅಧಿ ಕಾರಿಗಳು ಶ್ರಮಿಸುವಂತೆ ಜಿಲ್ಲಾಧಿಕಾರಿ ಗಳು ಸೂಚಿಸಿದರು.ಸೈನಿಕ ಶಾಲೆಯ ಪ್ರಾಚಾರ್ಯ ಕರ್ನಲ್ ಆರ್.ಬಾಲಾಜಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಕೆ.ಬಿ.ಶಿವಕುಮಾರ, ಹೆಚ್ಚುವರಿ ಜಿಲ್ಲಾಧಿಕಾರಿ ಜೆ.ಸಿದ್ದಪ್ಪ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಎಫ್.ಎ. ಟ್ರಾಸ್ಗರ್,  ಉಪವಿಭಾಗಾಧಿಕಾರಿ ಡಾ.ಬೂದೆಪ್ಪ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್.ಬಿ. ಪಾಟೀಲ, ಹೆಸ್ಕಾಂ ಕಾರ್ಯ ನಿರ್ವಾಹಕ ಎಂಜಿನಿಯರ್‌  ವಿ.ಎಸ್. ತೇಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಗುಂಡಪ್ಪ,   ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಆರ್.ಎಂ. ಸಜ್ಜನ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry