ಭಾನುವಾರ, ಜೂನ್ 13, 2021
23 °C

ಮೊಬೈಲ್ ಗ್ರಾಹಕರಿಗೆ ಬಿಲ್ ಬಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್):  ಸೇವಾ ತೆರಿಗೆಯನ್ನು ಶೇ 2ರಷ್ಟು ಹೆಚ್ಚಳ ಮಾಡಿರುವುದರಿಂದ ಮೊಬೈಲ್ ಗ್ರಾಹಕರ ಮೇಲೂ ಪರಿಣಾಮ ಬೀರಲಿದೆ ಎಂದು ಭಾರ್ತಿ ಏರ್‌ಟೆಲ್ ಹೇಳಿದೆ.

`ಶೇಕಡಾ 10ರಷ್ಟಿದ ಸೇವಾ ತೆರಿಗೆಯನ್ನು ಶೇ 12ಕ್ಕೆ ಏರಿಸಲಾಗಿದೆ. ಸ್ವಾಭಾವಿಕವಾಗಿಯೇ ಇದು ಗ್ರಾಹಕರಿಗೆ ವರ್ಗಾವಣೆ ಆಗುತ್ತದೆ~ ಎಂದು ಭಾರ್ತಿ ಏರ್‌ಟೆಲ್ ಮುಖ್ಯಸ್ಥ ಸುನಿಲ್ ಭಾರ್ತಿ ಮಿತ್ತಲ್ ತಿಳಿಸಿದ್ದಾರೆ.

`ಮುಂದಿನ ಜೂನ್‌ನಲ್ಲಿ ಹೊಸ ರಾಷ್ಟ್ರೀಯ ದೂರಸಂಪರ್ಕ ನೀತಿ ಘೋಷಣೆ ಆಗುವ ಸಾಧ್ಯತೆ ಇದ್ದರೂ ದೂರಸಂಪರ್ಕ ವಲಯದ ಬಗ್ಗೆ ಬಜೆಟ್‌ನಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳಿಲ್ಲ~ ಎಂದು ಅವರು ಅಸಮಾಧಾನ ವ್ಯಕ್ತಪಡಿ ಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.