ಗುರುವಾರ , ಮೇ 26, 2022
31 °C

ಮೊರಾಕ್ಕೊ, ಕುವೈತ್‌ನಲ್ಲೂ ಪ್ರತಿಭಟನೆ ತೀವ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಬತ್/ ಕುವೈತ್(ಎಎಫ್‌ಪಿ): ಪ್ರಜಾಪ್ರಭುತ್ವ ಸ್ಥಾಪನೆಗಾಗಿ ತೈಲ ರಾಷ್ಟ್ರಗಳಲ್ಲಿ ಪ್ರತಿಭಟನೆ ಮುಂದುವರೆದಿದ್ದು, ಕುವೈತ್ ಮತ್ತು ಮೊರಾಕ್ಕೊದಲ್ಲೂ ಸರ್ಕಾರದ ವಿರುದ್ಧದ ಪ್ರತಿಭಟನೆ ತೀವ್ರಗೊಂಡಿದೆ.ರಾಜಕೀಯ ಕ್ಷೇತ್ರದಲ್ಲಿ ತುರ್ತಾಗಿ ಸುಧಾರಣೆ ತರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರಜಾಪ್ರಭುತ್ವ ಪರವಿರುವ ನೂರಾರು ಜನರು ಭಾನುವಾರ ಮೊರಾಕ್ಕೊ ಸಂಸತ್ತಿನ ಎದುರು  ಪ್ರತಿಭಟನೆ ನಡೆಸಿದರು.ಈ ಮಧ್ಯೆ, ಪ್ರಧಾನಿ ಪದತ್ಯಾಗಕ್ಕೆ ಆಗ್ರಹಿಸಿ ಮಂಗಳವಾರ ಕುವೈತ್‌ನಲ್ಲಿ ಯುವಕರ ಗುಂಪು ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲು ಉದ್ದೇಶಿಸಿದೆ.  ಸರ್ಕಾರದ ವಿರುದ್ಧ ಜನರನ್ನು ಸಂಘಟಿಸಲು ಯುವಕರ ಗುಂಪು ಟ್ವಿಟ್ಟರ್ ಮತ್ತು ಫೇಸ್ ಬುಕ್ ಮೊರೆ ಹೋಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.