ಸೋಮವಾರ, ಜೂನ್ 21, 2021
28 °C

ಮೊರಾರ್ಜಿ ಶಾಲೆ ಪ್ರವೇಶ ಪರೀಕ್ಷೆಗೆ 1,134 ಮಕ್ಕಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ:  ‘2014–15ನೇ ಸಾಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ಜಿಲ್ಲೆಯ ನಾಲ್ಕು ತಾಲ್ಲೂಕು ವ್ಯಾಪ್ತಿಯಲ್ಲಿ 1,134 ವಿದ್ಯಾ­ರ್ಥಿಗಳು ಹಾಜರಾ­ಗಿದ್ದಾರೆ’ ಎಂದು ರಾಜ್ಯ ಅಂಬೇಡ್ಕರ್ ಅಭಿ­ವೃದ್ಧಿ ನಿಗಮ ಪ್ರಧಾನ ವ್ಯವ­ಸ್ಥಾಪಕ ಹಾಗೂ ಪರೀಕ್ಷ ಪರಿಶೀಲಕ ಕೆ.ಸಿ .ಶ್ರೀರಾಮಲು ತಿಳಿಸಿದರು.ತಾಲ್ಲೂಕಿನ ಹೆಣ್ಣು ಮಕ್ಕಳ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಅವರು ಮಾತನಾಡಿದರು.‘ಹಿಂದುಳಿದ, ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾರ್ಥ­ಿಗಳಿಗೆ ಗುಣ­ಮಟ್ಟದ ಶಿಕ್ಷಣ ನೀಡಲು ಒತ್ತು ನೀಡಲಾಗುತ್ತಿದೆ. ತಾಲ್ಲೂಕಿಗೆ ಒಂದರಂತೆ ನಾಲ್ಕು ಪರೀಕ್ಷಾ ಕೇಂದ್ರ­ಗಳಲ್ಲಿ ೪೮ ಕೊಠಡಿಯಲ್ಲಿ ಪರೀಕ್ಷೆ ನಡೆಸ--ಲಾಗುತ್ತಿದೆ’ ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.