ಸೋಮವಾರ, ಏಪ್ರಿಲ್ 12, 2021
24 °C

ಮೊಳಕಾಲ್ಮುರು:ಕುಡಿಯುವ ನೀರು ಯೋಜನೆ ಪೂರ್ಣಕ್ಕೆ ತಾಕೀತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ತಾಲ್ಲೂಕಿನ ಹಲವು ಗ್ರಾಮಗಳಿಗೆ ಕುಡಿಯುವ ನೀರು ಉಣಿಸಲಿರುವ ರಾಜೀವ್‌ಗಾಂಧಿ ಸಬ್‌ಮಿಷನ್ ಕುಡಿಯುವ ನೀರಿನ ಯೋಜನೆ ಪೂರ್ಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ತಾ.ಪಂ. ಇಒ ಬಿ.ಎಸ್. ಮಂಜುನಾಥ್ ತಾಕೀತು ಮಾಡಿದರು.ಇಲ್ಲಿನ ಸಾಮರ್ಥ್ಯಸೌಧದಲ್ಲಿ ಶುಕ್ರವಾರ ತಾ.ಪಂ. ಅಧ್ಯಕ್ಷೆ ರತ್ನಮ್ಮ ಮಹೇಶ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿದ್ದ ತಾ.ಪಂ. ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು ಈ ಬಗ್ಗೆ ಹಲವು ಸಭೆಗಳಲ್ಲಿ ಪೂರ್ಣಕ್ಕೆ ಸೂಚಿಸಲಾಗಿದೆ. ಕಳೆದ ಜಿ.ಪಂ. ಸಭೆಯಲ್ಲಿ ಮಾಧ್ಯಮಗಳಲ್ಲಿ ವರದಿ ಬಂದ ಹಿನ್ನೆಲೆಯಲ್ಲಿ ಸಿಇಒ ಏ. 25ರ ಒಳಗಾಗಿ ಪೂರ್ಣಗೊಳಿಸಿ ಉದ್ಘಾಟನೆ ಮಾಡಿಸುವಂತೆ ತಾಕೀತು ಮಾಡಿದ್ದಾರೆ. ಆದರೂ ವಿಳಂಬವಾಗುತ್ತಿರುವುದು ಸರಿಯಲ್ಲ. ಯೋಜನೆಯಿಂದ ಕಾಡುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದರು.ಜಿ.ಪಂ. ಎಇಇ ಸತ್ಯಪ್ಪ ಮಾತನಾಡಿ ಯೋಜನೆ ಪೂರ್ಣ ಕೆಲಸ ಮುಗಿದಿದೆ. ಬಿ.ಜಿ.ಕೆರೆ ಹಾಗೂ ಕುಂಟೋಬಯ್ಯನಹಟ್ಟಿ ಬಳಿ ರೈಲ್ವೆ ಕ್ರಾಸಿಂಗ್ ಬಳಿ ಪೈಪ್ ಅಳವಡಿಸಬೇಕಿದೆ. ಇದಕ್ಕೆ ರೈಲ್ವೆ ಇಲಾಖೆ ಅನುಮತಿ ಸಿಕ್ಕಿದ್ದು, ಗುತ್ತಿಗೆ ಪಡೆದಿರುವ ಬೆಂಗಳೂರು ಮೂಲದ ಕಂಪೆನಿ ವಿಳಂಬ ಮಾಡುತ್ತಿದೆ. ಅವರಿಗೆ ನೋಟಿಸ್ ಸಹ ನೀಡಲಾಗಿದೆ. ಈವರೆಗೆ ಯೋಜನೆಯ ್ಙ 8.70 ಕೋಟಿ ಹಣ ಗುತ್ತಿಗೆದಾರರಿಗೆ ಪಾವತಿ ಮಾಡಲಾಗಿದ್ದು, ಬಾಕಿ ಹಣವನ್ನು ಸಿಇಒ ಆದೇಶ ನಂತರ ನೀಡಲಾಗುವುದು ಎಂದರು.ಕೃಷಿ ಅಧಿಕಾರಿ ಕೆಂಗೇಗೌಡ ಮಾತನಾಡಿ, ನೂತನವಾಗಿ ಜಾರಿಗೆ ಬಂದಿರುವ ಸುವರ್ಣಭೂಮಿ ಯೋಜನೆ ಅಡಿಯಲ್ಲಿ ಸಣ್ಣ ಹಾಗೂ ಅತೀಸಣ್ಣ ರೈತರ ಭೂಮಿಯನ್ನು ಅಭಿವೃದ್ಧಿಪಡಿಸಿ ಹೆಚ್ಚು ಇಳುವರಿಗೆ ಕಾರ್ಯಕ್ರಮ ರೂಪಿಸಿಕೊಳ್ಳಲು ್ಙ 10 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತಿದೆ. ಇದನ್ನು ಕೃಷಿ, ತೋಟಗಾರಿಕೆ ಮತ್ತು ರೇಷ್ಮೆಇಲಾಖೆ ಮೂಲಕ ಅನುಷ್ಠಾನ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸಲು ಏ. 25 ಕೊನೆ ದಿನವಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ದಾಖಲಾತಿ ಬೇಕಾಗಿಲ್ಲ, ಆಯ್ಕೆ ನಂತರ ದಾಖಲಾತಿಗಳನ್ನು ಸಲ್ಲಿಸಬೇಕಾಗುತ್ತದೆ ಎಂದು ಮಾಹಿತಿ ನೀಡಿದರು.ಈ ವರ್ಷ ಶೇಂಗಾ ಬಿತ್ತನೆಬೀಜಕ್ಕೆ ಹೆಚ್ಚಿನ ಬೇಡಿಕೆ ಬರುವ ಸೂಚನೆ ಇದ್ದು, 15-20 ಲೋಡ್ ಬೇಕಾಗುವ ಸೂಚನೆ ಇದೆ. ಶೇಖರಣೆ ಮಾಡಲು ಹಾಗೂ ವಿತರಣೆ ಮಾಡಲು ಪಟ್ಟಣದ ಅಂಬೇಡ್ಕರ್ ಸಮುದಾಯ ಭವನ ಕೊಡಿಸಬೇಕು ಎಂದು ಮನವಿ ಮಾಡಿದರು.ಬಿಇಒ ಬಿ. ಉಮಾದೇವಿ ಮಾತನಾಡಿ, ತಾಲ್ಲೂಕಿನಲ್ಲಿ ಒಟ್ಟು 50 ಶಿಕ್ಷಕರ ಹುದ್ದೆ ಖಾಲಿ ಇದ್ದು, ಈ ಪೈಕಿ 25 ಹುದ್ದೆಗಳನ್ನು ಜೂನ್‌ನಲ್ಲಿ ಚಿತ್ರದುರ್ಗ ತಾಲ್ಲೂಕಿನ ಹೆಚ್ಚುವರಿ ಶಿಕ್ಷಕರನ್ನು ನಿಯೋಜನೆ ಮಾಡುವ ಮೂಲಕ ತುಂಬಲಾಗುವುದು ಎಂದು ಡಿಡಿಪಿಐ ಭರವಸೆ ನೀಡಿದ್ದಾರೆ ಎಂದು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.