ಭಾನುವಾರ, ಏಪ್ರಿಲ್ 18, 2021
33 °C

ಮೊಳಕಾಲ್ಮುರು: ಶೈಕ್ಷಣಿಕ ಮೌಲ್ಯಮಾಪನ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೊಳಕಾಲ್ಮುರು: ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಗುಣಮಟ್ಟ ಸುಧಾರಿಸುವ ನಿಟ್ಟಿನಲ್ಲಿ ತಾಲ್ಲೂಕಿನಾದ್ಯಂತ ಶೈಕ್ಷಣಿಕ ಮೌಲ್ಯಮಾಪನ ಮತ್ತು ಶಾಲೆಗಳ ಆಡಳಿತಾತ್ಮಕ ವಿಷಯಗಳ ಪರಿಶೀಲನೆ ಕಾರ್ಯವನ್ನು ಶಿಕ್ಷಣ ಇಲಾಖೆ ಆರಂಭಿಸಿದೆ.ಶಾಲೆಗಾಗಿ ನಾವು-ನೀವು ಕಾರ್ಯಕ್ರಮದ ಮುಂದುವರಿದ ಭಾಗವಾಗಿ ಈ ಯೋಜನೆ ಆರಂಭವಾಗಿದೆ. ತಾಲ್ಲೂಕಿನ 142 ಸರ್ಕಾರಿ ಹಿರಿಯ, ಕಿರಿಯ ಸರ್ಕಾರಿ ಪ್ರಾಥಮಿಕ ಶಾಲೆಗಳು ಹಾಗೂ 9 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈ ಕಾರ್ಯ ಆರಂಭವಾಗಿದೆ. 4, 6, 8 ಮತ್ತು 10ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಈ ವೇಳೆಯಲ್ಲಿ ಪರೀಕ್ಷೆ ಮಾಡಲಾಗುವುದು ಎಂದು ಶಿಕ್ಷಣ ಸಂಯೋಜಕ ಎಸ್.ಬಿ. ರಾಮಚಂದ್ರಯ್ಯ ಶನಿವಾರ ತಿಳಿಸಿದರು.ಎಲ್ಲಾ ವಿಷಯಗಳ ವಿಷಯವಾರು ಪ್ರಶ್ನೆಗಳಿಗೆ ಉತ್ತರ ನೀಡುವ ಆಧಾರದಲ್ಲಿ ಮಾಹಿತಿ ಪಡೆದುಕೊಳ್ಳಲಾಗುವುದು. ಇದಕ್ಕಾಗಿ ತಾಲ್ಲೂಕಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಬಿಇಒ ಕಚೇರಿ ಹಂತದಲ್ಲಿ ಏಳು ಹಾಗೂ ಪ್ರೌಢಶಾಲೆಗಳಿಗೆ ಡಿಡಿಪಿಐ ಹಂತದಲ್ಲಿ ಒಂದು ತಂಡ ರಚನೆ ಮಾಡಲಾಗಿದೆ. ಒಟ್ಟು 26 ಸಿಬ್ಬಂದಿ ತಂಡದಲ್ಲಿದ್ದು, ಜುಲೈ 28ರವರೆಗೆ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.ಈ ಸಮಯದಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮತ್ತೆ ಶಾಲೆಗೆ ಕರೆತರಲು, ಶಾಲಾಭಿವೃದ್ಧಿ ಸಮಿತಿ ಜತೆ ಶಾಲೆಯ ಕುಂದುಕೊರತೆ ಬಗ್ಗೆ, ಮಕ್ಕಳ ಶಿಕ್ಷಣ ಹಕ್ಕು, ಕಡ್ಡಾಯ ಶಿಕ್ಷಣ ಹಕ್ಕು ಮತ್ತಿತರ ಯೋಜನೆಗಳ ಸಮರ್ಪಕ ಅನುಷ್ಠಾನ ಮಾಡುವ ಬಗ್ಗೆ ಚರ್ಚೆ ನಡೆಸುವ ಮೂಲಕ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.