ಮೋಟಮ್ಮ ಸ್ಪಷ್ಟನೆ

7

ಮೋಟಮ್ಮ ಸ್ಪಷ್ಟನೆ

Published:
Updated:

ಬೆಂಗಳೂರು: `ಮೈಸೂರು ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿನಿ ಎಂ.ಸರಿತಾ ಅವರ ಹೆಸರನ್ನು ಸದನದಲ್ಲಿ ಪ್ರಸ್ತಾಪಿಸಿಲ್ಲ. ಬಿಜೆಪಿ, ಭಜರಂಗದಳದ ಕುಮ್ಮಕ್ಕಿನಿಂದ ಆಕೆ ನನ್ನ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಹೇಳಿದ್ದಾರೆ~ ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕಿ ಮೋಟಮ್ಮ ಆರೋಪಿಸಿದರು. `ನನ್ನ ಹೇಳಿಕೆ ತಿರುಚುವ ಕೆಲಸ ಮಾಡುತ್ತಿದ್ದಾರೆ. ಎಲ್ಲೂ ಸರಿತಾ ಹೆಸರು ಪ್ರಸ್ತಾಪಿಸಿಲ್ಲ. ಸರಿತಾಗೆ ಅನ್ಯಾಯ ಆಗಿರುವುದನ್ನು ಖಂಡಿಸಿದ್ದೇನೆ. ಯಾವುದೇ ಮಹಿಳೆಗೆ ಅನ್ಯಾಯವಾದರೂ ಕಠಿಣ ಶಿಕ್ಷೆಯಾಗಬೇಕು ಎಂಬುದನ್ನು ಮೊದಲಿನಿಂದಲೂ ಪ್ರತಿಪಾದಿಸಿಕೊಂಡು ಬಂದಿದ್ದೇನೆ. ಕೊಡಗಿನ ಪ್ರಾಂಶುಪಾಲರೊಬ್ಬರು ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿ, ಅತ್ಯಾಚಾರ ಎಸಗಿದ್ದನ್ನು ಸದನದಲ್ಲಿ ಪ್ರಸ್ತಾಪಿಸಿದ್ದೆ~ ಎಂದು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry