ಮೋದಿಗೆ ಅಭಿನಂದನೆಗಳ ಮಹಾಪೂರ

7

ಮೋದಿಗೆ ಅಭಿನಂದನೆಗಳ ಮಹಾಪೂರ

Published:
Updated:

ಚೆನ್ನೈ (ಪಿಟಿಐ): ಸತತ ಮೂರನೇ ಬಾರಿ ಗುಜರಾತ್‌ನಲ್ಲಿ ವಿಜಯ ಪತಾಕೆ ಹಾರಿಸಿರುವ ನರೇಂದ್ರ ಮೋದಿ ಅವರತ್ತ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಅವರು ಮೋದಿ ಅವರನ್ನು ಅಭಿನಂದಿಸಿದ್ದಾರೆ. ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಮೋದಿ ಅವರಿಗೆ ತಮ್ಮ ಹೃದಯಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.ಜಯಲಲಿತಾ ಅವರ ಜತೆ ನರೇಂದ್ರ ಮೋದಿ ಮೊದಲಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಜಯಲಲಿತಾ ಅವರು ಮುಖ್ಯಮಂತ್ರಿ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸ್ವತ: ಮೋದಿ ಅವರೇ ತೆರಳಿದ್ದರು. ಹಾಗೆಯೇ ಮೋದಿ ಅವರ ಸದ್ಭಾವನಾ ಯಾತ್ರೆಗೆ ಜಯಲಲಿತಾ ಅವರು ತಮ್ಮ ಪಕ್ಷದಿಂದ ಇಬ್ಬರನ್ನು ಕಳುಹಿಸಿದ್ದರು.ಹಿಂದಿ ಸಿನಿಮಾ ಜಗತ್ತಿನ ಹಿರಿಯ ನಟ ಅಮಿತಾಬ್ ಬಚ್ಚನ್ ಕೂಡ ಮೋದಿ ಅವರನ್ನು ಅಭಿನಂದಿಸಿದ್ದಾರೆ. ಸದ್ಯ ಚೆನ್ನೈನಲ್ಲಿ ನಡೆಯುತ್ತಿರುವ 10 ನೇ ಚೆನ್ನೈ ಅಂತರರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪಾಲ್ಗೊಂಡಿರುವ ಬಚ್ಚನ್ ಅವರು ಇಲ್ಲಿಂದಲೇ ಮೋದಿಗೆ ಶುಭ ಕೋರಿದ್ದಾರೆ.ಒಡಿಶಾದ ಮುಖ್ಯಮಂತ್ರಿ ಹಾಗೂ ಬಿಜು ಜನತಾದಳದ ನಾಯಕ ನವೀನ್ ಪಟ್ನಾಯಕ್ ಅವರು ಮೋದಿ ಸೇರಿದಂತೆ ಹಿಮಾಚಲ ಪ್ರದೇಶದಲ್ಲಿ ಜಯ ಗಳಿಸಿರುವ ಕಾಂಗ್ರೆಸ್‌ನ್ನು ಅಭಿನಂದಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry