ಸೋಮವಾರ, ಮೇ 17, 2021
23 °C

ಮೋದಿಗೆ ವೀಸಾ ಇಲ್ಲ: ಅಮೆರಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್ (ಪಿಟಿಐ): `ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರಿಗೆ ವೀಸಾ ನಿರಾಕರಿಸಿದ್ದು ಈ ವಿಚಾರದಲ್ಲಿ ಯಾವುದೇ ಬದಲಾವಣೆಯಿಲ್ಲ~ ಎಂದು ಅಮೆರಿಕ ಹೇಳಿದೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ವೇತಭವನದ ವಕ್ತಾರೆ ವಿಕ್ಟೋರಿಯಾ ನುಲಂದ್, `ವೀಸಾ ನಿರಾಕರಣೆ ಸಂಬಂಧ 2005ರ ಕೈಗೊಂಡ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ~ ಎಂದು ಸ್ಪಷ್ಟಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಮೋದಿ ಅವರಿಗೆ ರಾಜತಾಂತ್ರಿಕ ವೀಸಾ ನೀಡುವ ವಿಚಾರವನ್ನು ಮರುಪರಿಶೀಲಿಸುವಂತೆ ಅಮೆರಿಕ ಕಾಂಗ್ರೆಸ್ ಸದಸ್ಯ ಜೋ ವಾಲ್ಷ್ ಅವರು ವಿದೇಶಾಂಗ ಕಾರ್ಯದರ್ಶಿ ಹಿಲರಿ ಕ್ಲಿಂಟನ್‌ಗೆ ಪತ್ರ ಬರೆದಿದ್ದರು. ಈ ಪತ್ರದ ಬಗ್ಗೆ ಕೇಳಿದ ಪ್ರಶ್ನೆಗೆ ನುಲಂದ್ ಹೀಗೆ ಪ್ರತಿಕ್ರಿಯಿಸಿದ್ದಾರೆ.

`ಮೋದಿ ಅವರಿಗೆ ವೀಸಾ ನೀಡುವ ವಿಷಯದಲ್ಲಿ 2005ರ ನೀತಿಯನ್ನು ಬದಲಾಯಿಸಬಾರದು~ ಎಂದು ಅಮೆರಿಕದಲ್ಲಿ ನೆಲೆಸಿರುವ ಭಾರತೀಯ ಮೂಲದ ಮುಸ್ಲಿಮ್ ಸಮುದಾಯದವರು ಕೆಲ ದಿನಗಳ ಹಿಂದೆ ಹೇಳಿಕೆ ನೀಡಿದ್ದರು.

ವೀಸಾ ನೀಡಿಕೆ ಸಂಬಂಧ ಅಮೆರಿಕದ ನಡೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ನವದೆಹಲಿಯಲ್ಲಿ ಉತ್ತರ ನೀಡಿದ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್, `ವೀಸಾ ಕುರಿತು ಅಮೆರಿಕದ ನೀತಿಯನ್ನು ನಾವು ಪ್ರಶ್ನಿಸಲಾಗದು.

ಮೋದಿ ಒಂದು ರಾಜ್ಯದ ಮುಖ್ಯಮಂತ್ರಿಯಾಗಿರುವುದರಿಂದ, ಇದೊಂದು ಗಂಭೀರ ವಿಷಯವಾಗಿದೆ~ ಎಂದು ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.