ನವದೆಹಲಿ (ಪಿಟಿಐ): ಹಣಕಾಸಿನ ಅವ್ಯವಹಾರ ಸಂಬಂಧ ವಿಚಾರಣೆ ನಡೆಸುತ್ತಿರುವ ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಎಂದು ಕೋರಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

`ಬಿಸಿಸಿಐ ರಚಿಸಿರುವ ಮೂರು ಮಂದಿಯ ಸಮಿತಿ ಅಧಿಕೃತವಾಗಿದೆ~ ಎಂದು ನ್ಯಾಯಮೂರ್ತಿಗಳಾದ ಜೆ.ಎಂ.ಪಂಚಾಲ್ ಹಾಗೂ ಎಚ್.ಎಲ್.ಗೋಖಲೆ ಅವರನ್ನೊಳಗೊಂಡ ಪೀಠ ಅಭಿಪ್ರಾಯಪಟ್ಟಿದೆ.
ಈ ಸಮಿತಿಯಲ್ಲಿ ಅರುಣ್ ಜೇಟ್ಲಿ, ಚಿರಾಯು ಅಮಿನ್ ಹಾಗೂ ಜ್ಯೋತಿರಾದಿತ್ಯ ಸಿಂದ್ಯ ಇದ್ದಾರೆ. ಜೇಟ್ಲಿ ಹಾಗೂ ಅಮಿನ್ ಅವರನ್ನು ತೆಗೆಯಬೇಕು ಎಂಬುದು ಮೋದಿ ಕೋರಿಕೆಯಾಗಿತ್ತು.

`ಸಮಿತಿ ಸದಸ್ಯರು ವಿಚಾರಣೆ ವೇಳೆ ಪೂರ್ವಗ್ರಹ ಪೀಡಿತರಾಗಿರುತ್ತಾರೆ ಎಂದು ನಾವು ಊಹಿಸಿಕೊಳ್ಳಲು ಸಾಧ್ಯವಿಲ್ಲ~ ಎಂದು ಪೀಠ ತಿಳಿಸಿದೆ.

ಶಿಸ್ತು ಸಮಿತಿಯನ್ನು ಪುನರ್ ರಚಿಸಬೇಕು ಹಾಗೂ ಅಮಾನತು ಶಿಕ್ಷೆ ರದ್ದು ಮಾಡಬೇಕು ಎಂದು ಕೋರಿ 2010ರ ಜುಲೈನಲ್ಲಿ ಮೋದಿ ಸಲ್ಲಿಸಿದ್ದ ಅರ್ಜಿಯನ್ನು ಮುಂಬೈ ಹೈಕೋರ್ಟ್ ತಿರಸ್ಕರಿಸಿತ್ತು. ಅದನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.