ಮೋದಿ ಇಂದು ಪ್ರಮಾಣ

7

ಮೋದಿ ಇಂದು ಪ್ರಮಾಣ

Published:
Updated:

ಗಾಂಧಿನಗರ/ನವದೆಹಲಿ (ಪಿಟಿಐ/ಐಎಎನ್‌ಎಸ್): ಗುಜರಾತ್‌ನಲ್ಲಿ ಬಿಜೆಪಿಯನ್ನು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿರುವ ನರೇಂದ್ರ ಮೋದಿ ಅವರು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಮಂಗಳವಾರ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. 2001ರಿಂದ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಮೋದಿ ಬುಧವಾರ ನಾಲ್ಕನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವರು. ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ. ಅಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ.ಮೋದಿ ನವದೆಹಲಿಯಲ್ಲಿ ಗುರುವಾರ ನಡೆಯಲಿರುವ ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳುವರು ಎಂದು ಪಕ್ಷದ ಮೂಲಗಳು ತಿಳಿಸಿವೆ.ಒಟ್ಟು 182 ಸದಸ್ಯ ಬಲದ ವಿಧಾನಸಭೆಗೆ ಬಿಜೆಪಿಯ 115 ಶಾಸಕರು ಆಯ್ಕೆಯಾಗಿದ್ದಾರೆ. 2007ರಲ್ಲಿ ಈ ಸಂಖ್ಯೆ 117 ಇತ್ತು. ಕಾಂಗ್ರೆಸ್ ಕೇವಲ 61 ಸ್ಥಾನ ಮಾತ್ರ ಪಡೆದಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry