ಶನಿವಾರ, ಜೂನ್ 19, 2021
27 °C

ಮೋದಿ ವಿರುದ್ಧ ಕೇಜ್ರಿವಾಲ್‌ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದರೆ ಅವರ ವಿರುದ್ಧ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಆಮ್‌ ಆದ್ಮಿ ಪಕ್ಷ (ಎಎಪಿ) ಕಣಕ್ಕಿಳಿಸುವುದು ಬಹುತೇಕ ಖಚಿತವಾಗಿದೆ.ಎಎಪಿ ಮುಖಂಡ ಹಾಗೂ ಕೇಜ್ರಿ­ವಾಲ್‌ ಪರಮಾಪ್ತ ಮನೀಶ್‌ ಸಿಸೋಡಿಯಾ ಈ ವಿಷಯ ತಿಳಿಸಿದ್ದಾರೆ.ಲೋಕಸಭಾ ಚುನಾವಣೆಯಲ್ಲಿ ಪಕ್ಷವು 350–400 ಕ್ಷೇತ್ರಗಳಲ್ಲಿ ಅಭ್ಯರ್ಥಿ­ಗಳನ್ನು ನಿಲ್ಲಿಸಲಿದೆ. ಕರ್ನಾ­ಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್‌, ಹರಿಯಾಣ ಮತ್ತು ದೆಹಲಿ ರಾಜ್ಯಗಳಲ್ಲಿ ಪಕ್ಷ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನೂ ಅವರು ವ್ಯಕ್ತಪಡಿಸಿದ್ದಾರೆ.‘ಒಂದು ವೇಳೆ ಮೋದಿ ವಾರಾಣಸಿ­ಯಿಂದ ಸ್ಪರ್ಧಿಸುತ್ತಾರೆ ಎಂದಾದರೆ, ಅವರ ವಿರುದ್ಧ ಕೇಜ್ರಿವಾಲ್‌ ಅವರನ್ನು ಕಣಕ್ಕಿಳಿಸುವುದು ಬಹುತೇಕ ಅಂತಿಮ­ವಾಗಿದೆ’ ಎಂದು ಸಿಸೋಡಿಯಾ ಹೇಳಿ­ದ್ದಾರೆ. ಒಂದು ವೇಳೆ ಮೋದಿ ಅವರು ಜನನಾಯಕರಾಗಿದ್ದರೆ, ಕೇವಲ ಒಂದೇ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ವಿಶ್ವಾಸ ತಮಗಿದೆ ಎಂದೂ ಹೇಳಿದ್ದಾರೆ.ಉತ್ತರ ಪ್ರದೇಶದಲ್ಲಿ ಪಕ್ಷದ ಪರ ಅಲೆಯನ್ನು ಸೃಷ್ಟಿಸುವುದಕ್ಕಾಗಿ ವಾರಾ­ಣಸಿ ಕ್ಷೇತ್ರದಿಂದ ನರೇಂದ್ರ ಮೋದಿ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ವದಂತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ.ಕರ್ನಾಟಕದಲ್ಲಿ ಉತ್ತಮ ಪ್ರದರ್ಶನ: ಎಎಪಿಯು ಕರ್ನಾಟಕ ಸೇರಿ ಇತರ  ರಾಜ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡ­ಲಿದೆ ಎಂಬ ವಿಶ್ವಾಸ ವ್ಯಕ್ತ­ಪಡಿಸಿದ್ದಾರೆ.‘ಕರ್ನಾಟಕದ ಜನರು ಬಿಜೆಪಿ ಹಾಗೂ ಕಾಂಗ್ರೆಸ್‌ ಆಡಳಿತದಿಂದ ಬೇಸತ್ತು ಹೋಗಿದ್ದಾರೆ. ಹಾಗಾಗಿ ನಮ್ಮ ಪಕ್ಷವು ಅಲ್ಲಿ ಗಮನಾರ್ಹ ಪ್ರದರ್ಶನ ನೀಡಲಿದೆ’ ಎಂದು ಸಿಸೋಡಿಯಾ ಹೇಳಿದ್ದಾರೆ.ಹಿರಿಯ ಗಾಂಧಿವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ಗೆ ಬೆಂಬಲ ವ್ಯಕ್ತಪಡಿಸಿದ್ದು ತಮಗೆ ಹಾಗೂ ಎಎಪಿ ಸಹೋದ್ಯೋಗಿಗಳಿಗೆ ಅಚ್ಚರಿ ತಂದಿದೆ ಎಂದೂ ತಿಳಿಸಿದ್ದಾರೆ.ಗುಲ್‌ ಪನಾಗ್‌ ಸ್ಪರ್ಧೆ: ನಟಿ ಗುಲ್‌ ಪನಾಗ್‌ ಚಂಡೀಗಡದಿಂದ ಎಎಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.