ಮೋಹನ್ ಧಾರಿಯಾಗೆ ಇಂದಿರಾ ಗಾಂಧಿ ಪ್ರಶಸ್ತಿ

6

ಮೋಹನ್ ಧಾರಿಯಾಗೆ ಇಂದಿರಾ ಗಾಂಧಿ ಪ್ರಶಸ್ತಿ

Published:
Updated:
ಮೋಹನ್ ಧಾರಿಯಾಗೆ ಇಂದಿರಾ ಗಾಂಧಿ ಪ್ರಶಸ್ತಿ

ನವದೆಹಲಿ, (ಪಿಟಿಐ): ರಾಷ್ಟ್ರೀಯ ಭಾವೈಕ್ಯತೆಯನ್ನು ಪ್ರೋತ್ಸಾಹಿಸಲು ಗಣನೀಯ ಕೊಡುಗೆ ನೀಡಿದ್ದಕ್ಕಾಗಿ ಕೇಂದ್ರದ ಮಾಜಿ ಸಚಿವ ಮೋಹನ್ ಧಾರಿಯಾ ಅವರು ರಾಷ್ಟ್ರೀಯ ಭಾವೈಕ್ಯತೆಗಾಗಿನ 26ನೇ ಇಂದಿರಾ ಗಾಂಧಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.ಪ್ರಶಸ್ತಿ ನಿರ್ಣಯ ಸಮಿತಿಯ ಕಾರ್ಯದರ್ಶಿ ಮೋತಿಲಾಲ್ ವೋಹ್ರಾ ಸೋಮವಾರ ಈ ವಿಷಯ ಪ್ರಕಟಿಸಿದರು. ಕಾಂಗ್ರೆಸ್ ಪಕ್ಷ ನೀಡುವ ಈ ಪ್ರಶಸ್ತಿಯು ಐದು ಲಕ್ಷ ರೂಪಾಯಿ ನಗದು ಹಾಗೂ ಫಲಕವನ್ನು ಒಳಗೊಂಡಿದೆ.

ಇಂದಿರಾ ಗಾಂಧಿ ಅವರ ಪುಣ್ಯತಿಥಿಯ ದಿನವಾದ ಇದೇ 31ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ 86ರ ಹರೆಯದ ಧಾರಿಯಾ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.ರಾಜ್ಯಸಭಾ ಮತ್ತು ಲೋಕಸಭಾ ಸದಸ್ಯರಾಗಿದ್ದ ಧಾರಿಯಾ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry