ಮೌಖಿಕ ಸಂದರ್ಶನ ಆಯ್ಕೆ ಪಟ್ಟಿ ಪ್ರಕಟ

7

ಮೌಖಿಕ ಸಂದರ್ಶನ ಆಯ್ಕೆ ಪಟ್ಟಿ ಪ್ರಕಟ

Published:
Updated:

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ 2011 ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ ಕನ್ನಡ ಭಾಷಾ ವಿಷಯದ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೌಖಿಕ ಸಂದರ್ಶನಕ್ಕೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯೋಗದ ಕೇಂದ್ರ ಕಚೇರಿ, ಪ್ರಾಂತೀಯ ಕಚೇರಿಗಳು ಹಾಗೂ ರಾಜ್ಯದ ಎಲ್ಲ ಸಾರ್ವಜನಿಕ ಶಿಕ್ಷಣ ಇಲಾಖೆಗಳಲ್ಲಿ ಪ್ರಕಟಿಸಲಾಗಿದೆ. ಫಲಿತಾಂಶವನ್ನು ಆಯೋಗದ  http://kpsc.kar.nic.in ನಲ್ಲಿ ನೋಡಬಹುದು ಎಂದು ಪ್ರಕಟಣೆ ತಿಳಿಸಿದೆ.

ಮೌಖಿಕ ಸಂದರ್ಶನವು ಬೆಳಗಾವಿ, ಗುಲ್ಬರ್ಗಾ, ಮೈಸೂರು ಮತ್ತು ಶಿವಮೊಗ್ಗಗಳಲ್ಲಿ ಮಾರ್ಚ್ 3 ರಂದು ಹಾಗೂ ಬೆಂಗಳೂರಿನಲ್ಲಿ ಮಾರ್ಚ್ 6 ರಂದು ನಡೆಯಲಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry