ಶುಕ್ರವಾರ, ಏಪ್ರಿಲ್ 16, 2021
31 °C

ಮೌಲ್ಯಗಳು ದಿನದಿಂದ ದಿನಕ್ಕೆ ಬದಲಾಗುತ್ತವೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೌಲ್ಯಗಳು ಕಾಲದಿಂದ ಕಾಲಕ್ಕೆ ಬದಲಾಗುತ್ತವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಒಬ್ಬನಿಗೆ ಒಳಿತು ಎನಿಸಿದ್ದು ಇನ್ನೊಬ್ಬರಿಗೆ ಕೆಡುಕೆನಿಸಬಹುದು. ಒಬ್ಬನ ಧರ್ಮ ಇನ್ನೊಬ್ಬರ ಧರ್ಮಕ್ಕೆ ವಿಭಿನ್ನವಾಗಿರುತ್ತದೆ. ಹಾಗಾಗಿ ನಿರ್ಮಲ ಧರ್ಮದಿಂದ ಧರೆಯನ್ನು ಪಾಲಿಸಲು ಸಾಧ್ಯವಿಲ್ಲ ಎಂದು ಚಿಂತಕ ಡಾ. ಟಿ.ಎನ್. ವಾಸುದೇವ ಮೂರ್ತಿ ಅವರು ಹೇಳಿದರು.ವಚನಜ್ಯೋತಿ ಬಳಗ ನಡೆಸುತ್ತಿರುವ ಕವಿ ಕಾವ್ಯ ಶ್ರಾವಣದ ಹದಿನಾಲ್ಕನೆಯ ದಿನ ನಗರದ ಕೇಂದ್ರೀಯ ಸದನ ಕನ್ನಡ ಸಂಘದ ಕಾರ್ಯಾಲಯದಲ್ಲಿ ಉಪನ್ಯಾಸ ನೀಡಿದ ಅವರು, `ಬಹಳಷ್ಟು ದಾರ್ಶನಿಕರು ಹೇಳುವ ಮೌಲ್ಯಗಳು ವಾಸ್ತವಿಕ ನೆಲೆಗಟ್ಟಿನಲ್ಲಿ ಅಸಂಬದ್ಧವಾಗಿರುತ್ತವೆ. ವಾಸ್ತವಕ್ಕೆ ಮತ್ತು ಮೌಲ್ಯಗಳಿಗೆ ತುಂಬಾ ವ್ಯತ್ಯಾಸವಿದೆ~ ಎಂದು ವಿಶ್ಲೇಷಿಸಿದರು.ಕಾರ್ಯಕ್ರಮದಲ್ಲಿ ವಚನ ಜ್ಯೋತಿ ಬಳಗದ ಅಧ್ಯಕ್ಷ ಎಸ್. ಪಿನಾಕಪಾಣಿ ಮತ್ತಿತರರು ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.