ಮಂಗಳವಾರ, ಮೇ 11, 2021
24 °C

ಮೌಲ್ಯಮಾಪನ ವೇಳೆ ಶಿಕ್ಷಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಎಸ್‌ಎಸ್‌ಎಲ್‌ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಗರದ ಲಕ್ಷ್ಮೀಜನಾರ್ದನ ಪ್ರೌಢಶಾಲೆಯಲ್ಲಿ ಮಂಗಳವಾರ ನಡೆದಿದೆ.ಪಾಂಡವಪುರ ತಾಲ್ಲೂಕಿನ ಚಿನಕುರಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಹ ಶಿಕ್ಷಕರಾಗಿದ್ದ ಪಿ.ಎಲ್. ಶಿವರಾಮು (59) ಎಂಬುವವರೇ ಮೃತರು. ಸಮಾಜ ವಿಜ್ಞಾನ ಶಿಕ್ಷಕರಾಗಿದ್ದ ಇವರು, ವಿದ್ಯಾರ್ಥಿಗಳ ಮೆಚ್ಚಿನ ಗುರುಗಳಾಗಿದ್ದರು. ಶಿವರಾಮು ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಏಕಾಏಕಿ ಕುಸಿದು ಬಿದ್ದರು. ಕೂಡಲೇ ಅವರನ್ನು ಅಲ್ಲಿದ್ದ ಸಹ ಶಿಕ್ಷಕರು ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಶಿವರಾಮು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವೈದ್ಯರು ತಿಳಿಸಿದರು ಎಂದು ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್.ಬಿ. ನಾಗೇಂದ್ರರಾವ್ `ಪ್ರಜಾವಾಣಿ~ಗೆ ತಿಳಿಸಿದರು.ಶಿವರಾಮು ಅವರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಶಿವರಾಮು ಪಾಂಡವಪುರ ನಿವಾಸಿಯಾಗಿದ್ದು, ಮೃತದೇಹವನ್ನು ಅಲ್ಲಿಗೆ ತೆಗೆದುಕೊಂಡು ಹೋಗಲಾಯಿತು.ಕಡ್ಡಾಯ ಹಾಜರಿ: ಅನಾರೋಗ್ಯದಿಂದ ಬಳಲುತ್ತಿದ್ದರೂ ಮೌಲ್ಯಮಾಪಕ್ಕೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಅಧಿಕಾರಿಗಳು ಸೂಚಿಸಿದ್ದು, ಅನಾಹುತಕ್ಕೆ ಕಾರಣವಾಯಿತು ಎಂದು ಅಲ್ಲಿದ್ದ ಕೆಲ ಶಿಕ್ಷಕರು ದೂರಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.