ಬೆಂಗಳೂರು: ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಬಹಿಷ್ಕರಿಸಿರುವ ಉಪನ್ಯಾಸಕರು ಮತ್ತು ರಾಜ್ಯ ಸರ್ಕಾರದ ನಡುವಣ ಹಗ್ಗಜಗ್ಗಾಟ ಮುಂದುವರಿದಿದ್ದು, ಮುಷ್ಕರನಿರತ ಉಪನ್ಯಾಸಕರ ವಿರುದ್ಧ ಕಾನೂನು ಅಸ್ತ್ರ ಝಳಪಿಸುವ ಸಂಬಂಧ ಸರ್ಕಾರ ಸೋಮವಾರ ಮಧ್ಯಾಹ್ನದ ವೇಳೆಗೆ ಸ್ಪಷ್ಟ ತೀರ್ಮಾನಕ್ಕೆ ಬರುವ ಸಾಧ್ಯತೆ ಇದೆ. ಪ್ರತಿಭಟನಾನಿರತರನ್ನು ಮನವೊಲಿಸಲು ಮುಖ್ಯ ಮಂತ್ರಿಯವರು ನಡೆಸಿದ ಪ್ರಯತ್ನವೂ ವಿಫಲವಾಗಿದೆ.

`ಬೆದರಿಕೆ ತಂತ್ರ ಸಲ್ಲ~
ಪ್ರಜಾವಾಣಿ ವಾರ್ತೆ
ಶಿವಮೊಗ್ಗ: ರಾಜ್ಯದಲ್ಲಿ ಬರ ಇದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರು ಬ್ಲ್ಯಾಕ್ಮೇಲ್ ತಂತ್ರ ಅನುಸರಿಸುವುದು ತಪ್ಪು. ಅವರ ಎಲ್ಲ ಬೇಡಿಕೆಗಳಿಗೆ ಸ್ಪಂದಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಭರವಸೆ ನೀಡಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಲ್ಲಿ 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ ಇದೆ. ಬೆದರಿಕೆ ತಂತ್ರ ಮಾಡುವುದು ಸರಿಯಲ್ಲ. ತಕ್ಷಣದಿಂದಲೇ ಮೌಲ್ಯಮಾಪನಕ್ಕೆ ಹಾಜರಾಗಿ ಎಂದು ಅವರು ಉಪನ್ಯಾಸಕರಲ್ಲಿ ಮನವಿ ಮಾಡಿದರು.
ಈಗ ಮೌಲ್ಯಮಾಪನ ಪೂರೈಸಿ, ಏಪ್ರಿಲ್ 19 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲಾಗುವುದು ಎಂದರು.

ಭಾನುವಾರ ಅಧಿಕೃತ ಪ್ರಕಟಣೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಆಯುಕ್ತರಾದ ವಿ.ರಶ್ಮಿ, `ಎಲ್ಲ ಕೇಂದ್ರಗಳಲ್ಲೂ ಮೌಲ್ಯಮಾಪನ ನಡೆಯುತ್ತಿದೆ. ಮೌಲ್ಯಮಾಪನ ಕಾರ್ಯಕ್ಕೆ ನೇಮಕಗೊಂಡಿರುವ ಉಪ ಮುಖ್ಯ ಪರೀಕ್ಷಕರು ಮತ್ತು ಸಹಾಯಕ ಮೌಲ್ಯಮಾಪಕರು ಸೋಮವಾರದಿಂದ ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಗೈರು ಹಾಜರಾಗುವವರ ವಿರುದ್ಧ ತೀವ್ರತರವಾದ ಶಿಸ್ತುಕ್ರಮ ಜರುಗಿಸಲಾಗುವುದು~ ಎಂದು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನ ಎಲ್ಲ ಕೇಂದ್ರಗಳಲ್ಲಿ ಭಾನುವಾರ ಅಲ್ಪ ಪ್ರಮಾಣದಲ್ಲಿ ಮೌಲ್ಯಮಾಪನ ನಡೆದಿದೆ. ದಾವಣಗೆರೆಯಲ್ಲೂ ನಡೆದಿದೆ. ಸರ್ಕಾರದ ಎಚ್ಚರಿಕೆಯ ನಡುವೆಯೂ ಉಪನ್ಯಾಸಕರ ಹಾಜರಾತಿ ಶೇಕಡ 20ರಿಂದ 25ರಷ್ಟು ಮಾತ್ರ ಇತ್ತು. ಉಳಿದ ಯಾವ ಕೇಂದ್ರಗಳಲ್ಲೂ ಉಪನ್ಯಾಸಕರು ಭಾನುವಾರ ಕರ್ತವ್ಯಕ್ಕೆ ಹಾಜರಾಗಿಲ್ಲ.
ತಮ್ಮ ಬೇಡಿಕೆಗಳ ಈಡೇರಿಸುವ ಕುರಿತು ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸುವವರೆಗೂ ಮುಷ್ಕರ ಮುಂದುವರಿಸುವುದಾಗಿ ಉಪನ್ಯಾಸಕರು ಪಟ್ಟು ಹಿಡಿದಿದ್ದಾರೆ.

ಭಾನುವಾರದಿಂದಲೇ ಕರ್ತವ್ಯಕ್ಕೆ ಹಾಜರಾಗುವಂತೆ ಉಪನ್ಯಾಸಕರಿಗೆ ತಾಕೀತು ಮಾಡಿದ್ದ ರಾಜ್ಯ ಸರ್ಕಾರ, ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿತ್ತು. ಆದರೂ ಮೌಲ್ಯಮಾಪನಕ್ಕೆ ಹಾಜರಾದವರ ಸಂಖ್ಯೆ ಶೇ 25 ದಾಟಿಲ್ಲ. ಅದರಲ್ಲೂ ಹೆಚ್ಚಿನವರು ಅನುದಾನಿತ ಕಾಲೇಜುಗಳ ಉಪನ್ಯಾಸಕರು. ಸರ್ಕಾರದ ಮೂಲಗಳ ಪ್ರಕಾರ, ಸರ್ಕಾರಿ ಕಾಲೇಜುಗಳ ಕೆಲವು ಉಪನ್ಯಾಸಕರು ಭಾನುವಾರ ಬೆಂಗಳೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದರು.

ಉಪನ್ಯಾಸಕರ ಮುಷ್ಕರ ಮುಂದುವರಿದಿರುವ ಕುರಿತು `ಪ್ರಜಾವಾಣಿ~ಗೆ ಪ್ರತಿಕ್ರಿಯೆ ನೀಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, `ಸರ್ಕಾರ ಕಾನೂನು ಕ್ರಮ ಕೈಗೊಳ್ಳುವಂತಹ ಪರಿಸ್ಥಿತಿಯನ್ನು ಉಪನ್ಯಾಸಕರು ನಿರ್ಮಿಸುವುದಿಲ್ಲ ಎಂದು ಭಾವಿಸಿದ್ದೇವೆ. ಸೋಮವಾರದವರೆಗೂ ಕಾದು ನೋಡುತ್ತೇವೆ. ಸೋಮವಾರವೂ ಮೌಲ್ಯಮಾಪನಕ್ಕೆ ಗೈರುಹಾಜರಾಗುವ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ಜರುಗಿಸುವ ನಿರ್ಧಾರಕ್ಕೆ ಬರುತ್ತೇವೆ~ ಎಂದು ಅವರು ತಿಳಿಸಿದರು.

`ಸರ್ಕಾರ ಅನಿವಾರ್ಯವಾಗಿ ಕಾನೂನು ಕೈಗೆತ್ತಿಕೊಳ್ಳಬೇಕಾದ ಪರಿಸ್ಥಿತಿಯನ್ನು ಉಪನ್ಯಾಸಕರೇ ನಿರ್ಮಾಣ ಮಾಡುತ್ತಿದ್ದಾರೆ. ಹಲವು ಉಪನ್ಯಾಸಕರು ಕರ್ತವ್ಯಕ್ಕೆ ಹಾಜರಾಗಲು ಸಿದ್ಧರಿದ್ದಾರೆ. ಆದರೆ, ಕೆಲವು ಉಪನ್ಯಾಸಕರು ಅಡ್ಡಿಪಡಿಸುತ್ತಿದ್ದಾರೆ. ಉಪನ್ಯಾಸಕರ ಮುಷ್ಕರದಲ್ಲಿ ರಾಜಕೀಯ ಲಾಭವನ್ನೂ ಪಡೆಯುವ ಪ್ರಯತ್ನಗಳು ನಡೆಯುತ್ತಿವೆ. ಇದು ದುರದೃಷ್ಟಕರ ಬೆಳವಣಿಗೆ~ ಎಂದರು.

ಮಧ್ಯಾಹ್ನ ನಿರ್ಧಾರ?: `ಅನೇಕ ಕಡೆಗಳಲ್ಲಿ ಭಾನುವಾರ ಮೌಲ್ಯಮಾಪನ ಆರಂಭವಾಗಿದೆ.
ಆದರೆ, ಉಪನ್ಯಾಸಕರ ಸಂಖ್ಯೆ ಕಡಿಮೆ ಇರುವುದರಿಂದ ಸಕಾಲಕ್ಕೆ ಫಲಿತಾಂಶ ಪ್ರಕಟಣೆಗೆ ಅಡ್ಡಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಕರ್ತವ್ಯಕ್ಕೆ ಹಾಜರಾಗುವಂತೆ ಮತ್ತೊಮ್ಮೆ ಉಪನ್ಯಾಸಕರಿಗೆ ಎಚ್ಚರಿಕೆ ನೀಡಲಾಗಿದೆ.

ಸೋಮವಾರ ಬೆಳಗಿನ ಮೂರು ಗಂಟೆಗಳ ಕಾಲ ಪರಿಸ್ಥಿತಿ ಅವಲೋಕಿಸಲಾಗುವುದು. ನಂತರ ಕರ್ತವ್ಯಕ್ಕೆ ಗೈರುಹಾಜರಾಗುವ ಉಪನ್ಯಾಸಕರ ವಿರುದ್ಧ ಕ್ರಮ ಕೈಗೊಳ್ಳುವ ಸಂಬಂಧ ನಿರ್ಧಾರಕ್ಕೆ ಬರಲಾಗುವುದು~ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ ಜಿ.ಕುಮಾರ ನಾಯಕ `ಪ್ರಜಾವಾಣಿ~ಗೆ ತಿಳಿಸಿದರು.

`ಮೌಲ್ಯಮಾಪನ ಪ್ರಕ್ರಿಯೆಯಲ್ಲಿನ ಬೆಳವಣಿಗೆಗಳ ಮೇಲೆ ತೀವ್ರ ನಿಗಾ ಇಡಲಾಗಿದೆ. ಸಚಿವರೂ ಆಗಾಗ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಯವರಿಗೂ ವರದಿ ನೀಡಲಾಗುತ್ತಿದೆ. ಸೋಮವಾರವೂ ಪರಿಸ್ಥಿತಿ ನಿಯಂತ್ರಣಕ್ಕೆ ಬರದಿದ್ದರೆ, ಉಪನ್ಯಾಸಕರ ವಿರುದ್ಧ ಕ್ರಮ ಜರುಗಿಸುವ ನಿರ್ಧಾರ ಕೈಗೊಳ್ಳುವುದು ಖಚಿತ~ ಎಂದರು.

ಸಿಎಂ ಸಭೆಯೂ ವಿಫಲ: ಭಾನುವಾರ ರಾತ್ರಿ ದೆಹಲಿಗೆ ತೆರಳುವ ಮುನ್ನ ತಮ್ಮ ಅಧಿಕೃತ ನಿವಾಸ `ಅನುಗ್ರಹ~ದಲ್ಲಿ ಉಪನ್ಯಾಸಕರ ಸಂಘಗಳ ಪ್ರತಿನಿಧಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಮುಷ್ಕರ ಕೈಬಿಡುವಂತೆ ಮನವಿ ಮಾಡಿಕೊಂಡರು. ಆದರೆ, ಸರ್ಕಾರದ ಮನವಿಗಷ್ಟೇ ಸಭೆ ಸೀಮಿತವಾಗಿದ್ದು, ಉಪನ್ಯಾಸಕರ ಕಡೆಯಿಂದ ಯಾವುದೇ ಪ್ರತಿಕ್ರಿಯೆಯೂ ದೊರೆತಿಲ್ಲ.

ಸಭೆಯ ಬಳಿಕ `ಪ್ರಜಾವಾಣಿ~ಗೆ ಪ್ರತಿಕ್ರಿಯಿಸಿದ ಉಪನ್ಯಾಸಕರ ಜಂಟಿ ಹೋರಾಟ ಸಮಿತಿ ಅಧ್ಯಕ್ಷ ಕೆ.ಟಿ.ಶ್ರೀಕಂಠೇಗೌಡ ಮತ್ತು ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಪುರ್ಲೆ, `ಮುಖ್ಯಮಂತ್ರಿಯವರು ಸರ್ಕಾರದ ಕೋರಿಕೆಯನ್ನು ನಮ್ಮ ಮುಂದಿಟ್ಟಿದ್ದಾರೆ. ಸಚಿವ ಕಾಗೇರಿ ಅವರು ಸೋಮವಾರ ಬೆಳಿಗ್ಗೆ ನಮ್ಮಂದಿಗೆ ಚರ್ಚೆ ನಡೆಸುತ್ತಾರೆ ಎಂಬ ಭರವಸೆಯನ್ನೂ ನೀಡಿದ್ದಾರೆ. ಸೋಮವಾರ ನಮ್ಮ ಹೋರಾಟ ಮುಂದುವರಿಯುತ್ತದೆ. ಸಚಿವರ ಜೊತೆ ಚರ್ಚಿಸಿದ ಬಳಿಕ ಉಪನ್ಯಾಸಕರ ಸಂಘಗಳ `ಕೋರ್~ ಸಮಿತಿ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲಾಗುವುದು. ಸೋಮವಾರವೂ ಮುಷ್ಕರ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ~ ಎಂದು ತಿಳಿಸಿದರು.

ಜೆಡಿಎಸ್ ಬೆಂಬಲ: ಈ ನಡುವೆ ಜೆಡಿಎಸ್ ಕೂಡ ಉಪನ್ಯಾಸಕರನ್ನು ಬೆಂಬಲಿಸಿ ಧರಣಿ ಆರಂಭಿಸುವುದಾಗಿ ಪ್ರಕಟಿಸಿದೆ. ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, `ಸರ್ಕಾರದ ಬೇಜವಾಬ್ದಾರಿತನದಿಂದ ಸಮಸ್ಯೆ ಸೃಷ್ಟಿಯಾಗಿದೆ. ವೇತನ ತಾರತಮ್ಯ ಸರಿಪಡಿಸುವುದಾಗಿ ಭರವಸೆ ನೀಡಿದ್ದ ಸರ್ಕಾರವೇ ಈಗ ಹಿಂದೆ ಸರಿಯುತ್ತಿದೆ. ಉಪನ್ಯಾಸಕರ ಬೇಡಿಕೆಗಳು ನ್ಯಾಯಯುತವಾಗಿವೆ. ಈ ಕಾರಣದಿಂದ ಅವರನ್ನು ಬೆಂಬಲಿಸಿ ಸೋಮವಾರದಿಂದ ಜೆಡಿಎಸ್, ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಲಿದೆ~ ಎಂದು ತಿಳಿಸಿದರು.

ಮುಷ್ಕರನಿರತ ಉಪನ್ಯಾಸಕರ ಜೊತೆ ಸಭೆ ನಡೆಸಿ ಸಮಸ್ಯೆ ಇತ್ಯರ್ಥಪಡಿಸುವಂತೆ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘ, ಡೆಮಾಕ್ರಟಿಕ್ ಟೀಚರ್ಸ್ ಆರ್ಗನೈಜೇಷನ್, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮತ್ತಿತರ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.