ಚಾಮರಾಜನಗರ: ಯುವಕರು ನೈತಿಕತೆ ಬೆಳೆಸಿಕೊಳ್ಳುವ ಮೂಲಕ ಮೌಲ್ಯಾಧಾರಿತ ಜೀವನ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಿ. ನಾಗಶ್ರೀ ಸಲಹೆ ನೀಡಿದರು.

ತಾಲ್ಲೂಕಿನ ಕೋಳಿಪಾಳ್ಯದ ಗಿರಿಜನ ಆಶ್ರಮ ಶಾಲೆಯಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಯುವಚೇತನ ತರಬೇತಿ ಶಿಬಿರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು. ಭಾರತ ಯುವಶಕ್ತಿಯಿಂದ ತುಂಬಿರುವ ದೊಡ್ಡ ದೇಶ. ಹೀಗಾಗಿ, ಇತರೇ ರಾಷ್ಟ್ರಗಳು ನಮ್ಮತ್ತ ನೋಡುತ್ತಿವೆ. ಇಲ್ಲಿರುವ ಯುವಶಕ್ತಿ ಸರಿಯಾದ ರೀತಿಯಲ್ಲಿ ಬಳಕೆಯಾದರೆ ವಿಶ್ವದಲ್ಲಿಯೇ ಭಾರತ ಅಭಿವೃದ್ಧಿಯಲ್ಲಿ ಮೊದಲ ಸ್ಥಾನಕ್ಕೇರುತ್ತದೆ ಎಂದು ಹೇಳಿದರು.

ಯುವಕರು ಸ್ವತಂತ್ರವಾಗಿ ಬದುಕು ರೂಪಿಸಿಕೊಂಡರೆ ದೇಶ ಅಭಿವೃದ್ಧಿ ಹೊಂದಲಿದೆ. ಯುವಕ, ಯುವತಿಯರು ರಾಷ್ಟ್ರದ ಅಭಿವೃದ್ಧಿ ಪರವಾದ ಚಿಂತನೆ ಮೈಗೂಡಿಸಿಕೊಳ್ಳಬೇಕು ಎಂದ ಅವರು, ದೇಶ ನಮಗೇನು ಮಾಡಿದೆ ಎಂಬ ಪ್ರಶ್ನೆ ಕೇಳುವ ಬದಲು ನಾನು ದೇಶಕ್ಕಾಗಿ ಏನು ಮಾಡಿದ್ದೇನೆ ಎಂಬ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದರು.

ಭಾರತೀಯ ಸಂಸ್ಕೃತಿ ಉಳಿಸಬೇಕಿದೆ. ಈ ನಿಟ್ಟಿನಲ್ಲಿ ಗುರು- ಹಿರಿಯರು, ತಂದೆ- ತಾಯಿಯನ್ನು ಗೌರವಿಸುವ ಗುಣ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಗುರಿ ಹಾಗೂ ಸಾಧಿಸುವ ಛಲ ಹೊಂದಬೇಕು. ಪ್ರತಿಯೊಬ್ಬರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಇಂತಹ ಶಿಬಿರಗಳು ಪೂರಕವಾಗಿವೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಪಿ. ಮಹದೇವಪ್ಪ ಮಾತನಾಡಿ, `ಯುವಶಕ್ತಿಯೇ ರಾಷ್ಟ್ರದ ಸಂಪತ್ತು. ತಮ್ಮಲ್ಲಿರುವ ಪ್ರತಿಭೆ ಹೊರಚೆಲ್ಲಲು ಇದೊಂದು ಉತ್ತಮ ವೇದಿಕೆ. ಯುವಚೇತನ ಶಿಬಿರಗಳು ಯುವಕ, ಯುವತಿಯರಲ್ಲಿ ಹೊಸ ಚೇತನ ನೀಡಲಿ' ಎಂದು ಹಾರೈಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಆರ್. ಕಾವೇರಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್. ಮೂರ್ತಿ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ. ಚೆಲುವಯ್ಯ, ನಾಗೇಶ್ ಸೋಸ್ಲೆ, ಬಸವಣ್ಣ, ಸಿ.ಎಂ. ನರಸಿಂಹಮೂರ್ತಿ, ರಂಗಸ್ವಾಮಿ, ಗೋಪಾಲ್, ರೇವಣ್ಣ, ಆಲ್ಕೆರೆ ಶಿವಕುಮಾರ್, ದಲಿತ್ರಾಜ್, ನಂಜುಂಡಸ್ವಾಮಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.