ಯಂಗ್ ಓರಿಯನ್ಸ್‌ಗೆ ಜಯ

ಬುಧವಾರ, ಮೇ 22, 2019
24 °C

ಯಂಗ್ ಓರಿಯನ್ಸ್‌ಗೆ ಜಯ

Published:
Updated:

ಬೆಂಗಳೂರು: ಹೊಂದಾಣಿಕೆಯ ಆಟವಾಡಿದ ಯಂಗ್ ಓರಿಯನ್ಸ್ ತಂಡದವರು ಇಲ್ಲಿ ನಡೆಯುತ್ತಿರುವ ಎನ್‌ಬಿಎ ಚಾಲೆಂಜ್ ಬ್ಯಾಸ್ಕೆಟ್‌ಬಾಲ್ ಲೀಗ್ ಪಂದ್ಯದಲ್ಲಿ ಸುಲಭ ಗೆಲುವು ಪಡೆದರು.ಕಂಠೀರವ ಕ್ರೀಡಾಂಗಣದ ಬ್ಯಾಸ್ಕೆಟ್‌ಬಾಲ್ ಅಂಗಳದಲ್ಲಿ ಭಾನುವಾರ ನಡೆದ ಬಾಲಕರ 16 ವರ್ಷ ವಯಸ್ಸಿನೊಳಗಿನವರ ವಿಭಾಗದ ಪಂದ್ಯದಲ್ಲಿ ಯಂಗ್ ಓರಿಯನ್ಸ್ 46-22 ರಲ್ಲಿ ಅಪ್ಪಯ್ಯ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡವನ್ನು ಮಣಿಸಿತು. ವರುಣ್ (10 ಪಾಯಿಂಟ್) ಅವರು ಓರಿಯನ್ಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.ಇದೇ ವಿಭಾಗದ ಇತರ ಪಂದ್ಯಗಳಲ್ಲಿ ಐಬಿಬಿಸಿ 38-35 ರಲ್ಲಿ ಭಾರತ್ ವಿರುದ್ಧವೂ, ವಿವೇಕ್ಸ್ 30-5 ರಲ್ಲಿ ಡಿಆರ್‌ಡಿಒ ಎದುರೂ ಗೆಲುವು ಪಡೆದವು. 16 ಪಾಯಿಂಟ್ ಕಲೆಹಾಕಿದ ಸಲ್ಮಾನ್ ಐಬಿಬಿಸಿ ತಂಡದ ರೋಚಕ ಗೆಲುವಿಗೆ ಕಾರಣರಾದರು.ಪುರುಷರ ವಿಭಾಗದ ಪಂದ್ಯದಲ್ಲಿ ಎಎಸ್‌ಸಿ 47-36 ರಲ್ಲಿ ಭಾರತ್ ಕ್ಲಬ್ ತಂಡವನ್ನು ಸೋಲಿಸಿತು. ವೆಳಿಯಪ್ಪನ್ (17 ಪಾಯಿಂಟ್) ವಿಜಯಿ ತಂಡದ ಪರ ಉತ್ತಮ ಪ್ರದರ್ಶನ ನೀಡಿದರು. ಮತ್ತೊಂದು ಪಂದ್ಯದಲ್ಲಿ ಸದರ್ನ್ ಬ್ಲೂಸ್ 72-63 ರಲ್ಲಿ ಸಿಎಂಪಿ ವಿರುದ್ಧ ಜಯ ಸಾಧಿಸಿತು. ಮಹಿಳೆಯರ ವಿಭಾಗದ ಪಂದ್ಯಗಳಲ್ಲಿ ಬೀಗಲ್ಸ್ ಬ್ಯಾಸ್ಕೆಟ್‌ಬಾಲ್ ಕ್ಲಬ್ ತಂಡ 47-42 ರಲ್ಲಿ ಜಯನಗರ ಸ್ಪೋರ್ಟ್ಸ್ ಕ್ಲಬ್ ತಂಡವನ್ನು ಮಣಿಸಿತು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry