ಮಂಗಳವಾರ, ಮೇ 18, 2021
24 °C

ಯಡಿಯೂರಪ್ಪಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊಪ್ಪಳ ವಿಧಾನಸಭಾ ಉಪ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಹಣ ಹಂಚಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಶುಕ್ರವಾರ ರಾತ್ರಿ ನೋಟಿಸ್ ಜಾರಿ ಮಾಡಿದೆ.ಯಡಿಯೂರಪ್ಪ ಇತ್ತೀಚೆಗೆ ಕೊಪ್ಪಳದಲ್ಲಿ ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ವ್ಯಕ್ತಿಯೊಬ್ಬರಿಗೆ ಒಂದು ಸಾವಿರ ರೂಪಾಯಿ ಹಣ ನೀಡಿದ ದೃಶ್ಯವನ್ನು ಚುನಾವಣಾ ಆಯೋಗ ನೇಮಿಸಿದ್ದ ಛಾಯಾಗ್ರಾಹಕರು ಸೆರೆ ಹಿಡಿದಿದ್ದರು. ಸೆ.18ರೊಳಗೆ ವಿವರಣೆ ನೀಡುವಂತೆ ಆಯೋಗವು ಅವರಿಗೆ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.