ಸೋಮವಾರ, ಜೂನ್ 21, 2021
29 °C

ಯಡಿಯೂರಪ್ಪ ಗಡುವು ಕೊಟ್ಟಿಲ್ಲ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: `ಪಕ್ಷದೊಳಗಿನ ಗೊಂದಲ, ಬಿಕ್ಕಟ್ಟಿನ ಬಗ್ಗೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಮುಗಿಯುವವರೆಗೂ ತಲೆಕೆಡಿಸಿಕೊಳ್ಳುವುದಿಲ್ಲ. ಸದ್ಯಕ್ಕೆ ನಮ್ಮ ಗಮನ ಚುನಾವಣೆ ಗೆಲ್ಲುವತ್ತ ಮಾತ್ರ~ ಎಂದು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ  ಹೇಳಿದರು.ನಗರದಲ್ಲಿ ಗುರುವಾರ ಪ್ರಚಾರದಲ್ಲಿ ತೊಡಗಿದ್ದ ಅವರು ಪತ್ರಕರ್ತರ ಜತೆ ಮಾತನಾಡಿದರು.`ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲು ಪಕ್ಷದಲ್ಲಿ ಯಾರಿಗೂ ಅಭ್ಯಂತರವಿಲ್ಲ. ಆದರೆ, ಅವರ ಮೇಲೆ ಇನ್ನೂ ಹಲವು ಮೊಕದ್ದಮೆಗಳಿವೆ. ಆ ಬಗ್ಗೆ ಪಕ್ಷದ ರಾಷ್ಟ್ರೀಯ ಮುಖಂಡರು ನಿರ್ಧಾರ ತೆಗೆದುಕೊಳ್ಳುತ್ತಾರೆ.

 

ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕೆಂದು ಯಡಿಯೂರಪ್ಪ ಯಾರ ಬಳಿಯೂ ಹೇಳಿಲ್ಲ. ಡೆಡ್‌ಲೈನ್ ಕೂಡ ಕೊಟ್ಟಿಲ್ಲ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.ಯಡಿಯೂರಪ್ಪ ಅವರು ಎಲ್ಲ ಪ್ರಕರಣಗಳಿಂದ ಮುಕ್ತರಾಗುವವರೆಗೂ ಅವರು ಮುಖ್ಯಮಂತ್ರಿ ಸ್ಥಾನ ಅಲಂಕರಿಸಲು ತಮ್ಮ ಸಹಮತವಿಲ್ಲ ಎಂದು ಸೂಚ್ಯವಾಗಿ ಹೇಳಿದರು.ಮಾರ್ಚ್ 13ರಿಂದ ಉಡುಪಿ-ಚಿಕ್ಕಮಗಳೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಯಡಿಯೂರಪ್ಪ ಬರುತ್ತಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅನಂತ ಕುಮಾರ್ ಸಹ ಇರುತ್ತಾರೆ ಎಂದರು.ಹುಬ್ಬಳ್ಳಿಯಲ್ಲ ಯಡಿಯೂರಪ್ಪ ಬೆಂಬಲಿಗರು ನಡೆಸುತ್ತಿರುವ ಸಮಾವೇಶಕ್ಕೆ ತಮಗೆ ಇನ್ನೂ ಆಹ್ವಾನ ಬಂದಿಲ್ಲ. ಆಹ್ವಾನ ಬಂದ ಮೇಲೆ ಪಾಲ್ಗೊಳ್ಳುವ ಬಗ್ಗೆ ಯೋಚಿಸುವೆ ಎಂದು ಈಶ್ವರಪ್ಪ  ಪ್ರತಿಕ್ರಿಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.