ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಇಂದು ಆದೇಶ?
ಬೆಂಗಳೂರು: ಸಿಬಿಐನಿಂದ ಬಂಧನದ ಭೀತಿ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಪುತ್ರರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಪ್ರಕಟಿಸಲಿದೆ.
ಜಿಂದಾಲ್ ಸಮೂಹದಿಂದ ಯಡಿಯೂರಪ್ಪ ಅವರು ತಮ್ಮ ಕುಟುಂಬದ ಸದಸ್ಯರು ನಡೆಸುವ ಶೈಕ್ಷಣಿಕ ಟ್ರಸ್ಟ್ಗೆ ಹಣ ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಹಾಗೂ ಅವರ ಪುತ್ರರು ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್. ವೆಂಕಟಸುದರ್ಶನ್ ಅವರ ಎದುರು ಯಡಿಯೂರಪ್ಪ ಪರವಾಗಿ ಹಿರಿಯ ವಕೀಲ ಸಿ.ವಿ. ನಾಗೇಶ್, ಸಿಬಿಐ ಪರವಾಗಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಶೋಕ್ ಭಾನ್ ವಾದ ಮಂಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.