ಯಡಿಯೂರಪ್ಪ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆ

7

ಯಡಿಯೂರಪ್ಪ ಪರ ವಕೀಲರಿಂದ ಜಾಮೀನು ಅರ್ಜಿ ಸಲ್ಲಿಕೆ

Published:
Updated:

ಬೆಂಗಳೂರು: ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪರ ವಕೀಲರು ಸೋಮವಾರ ಮಧ್ಯಂತರ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.ಜಾಮೀನು ಅರ್ಜಿಯ ವಿಚಾರಣೆಯು ಮಂಗಳವಾರ ಹೈಕೋರ್ಟಿನ ಏಕಸದಸ್ಯ ಪೀಠದಲ್ಲಿ ನಡೆಯಲಿದೆ.ಶನಿವಾರ ನ್ಯಾಯಾಂಗ ಬಂಧನಕ್ಕೆ ಒಳಗಾದ ಯಡಿಯೂರಪ್ಪ ಅವರನ್ನು ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕರೆದ್ಯೊಯಲಾಗಿತ್ತು. ಕಾರಾಗೃಹದಲ್ಲಿ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ಭಾನುವಾರ ಬೆಳಗಿನ ಜಾವ ಅವರನ್ನು ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ದಾಖಲಿಸಲಾಗಿದೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry