ಯಡಿಯೂರಪ್ಪ ಪ್ರತಿಕೃತಿ ದಹನ

7

ಯಡಿಯೂರಪ್ಪ ಪ್ರತಿಕೃತಿ ದಹನ

Published:
Updated:

ಶ್ರೀನಿವಾಸಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುವುದನ್ನು ಸ್ವಾಗತಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಸದಸ್ಯರು ಬಸ್ ನಿಲ್ದಾಣದ ಸಮೀಪ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕೃತಿ ದಹಿಸಿದರು.ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್.ಸೂರ್ಯನಾರಾಯಣ ಮಾತನಾಡಿ, ಭ್ರಷ್ಟಾಚಾರದಲ್ಲಿ ತೊಡಗಿ ಕರ್ನಾಟಕದ ಹೆಸರಿಗೆ ಮಸಿ ಬಳಿದಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೃಷ್ಣಯ್ಯಶೆಟ್ಟಿ ಅವರನ್ನು ಬಂಧಿಸಿರುವುದು ಇತರ ಭ್ರಷ್ಟರಿಗೆ ಎಚ್ಚರಿಕೆಯ ಗಂಟೆಯಾಗಿದೆ ಎಂದು ಹೇಳಿದರು.ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಸಚಿವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿರು.ರಾಜ್ಯದಲ್ಲಿ ರೈತರ ಮೇಲೆ ಪ್ರಮಾಣ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ರೈತರ ಹಿತ ಕಾಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ ಎಂದು ತಾಲ್ಲೂಕು ಘಟಕದ ಕಾರ್ಯದರ್ಶಿ ಪಿ.ಆರ್.ನವೀನ್ ಕುಮಾರ್ ಟೀಕಿಸಿದರು.ಭ್ರಷ್ಟಾಚಾರ ಆರೋಪವನ್ನು ಹೊತ್ತಿರುವ ಇತರರೂ ಸೆರೆಮನೆ ಸೇರಿದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರುತ್ತದೆ. ಭ್ರಷ್ಟ ವ್ಯವಸ್ಥೆಯನ್ನು ಮಟ್ಟ ಹಾಕಿದಂತಾಗುತ್ತದೆ ಎಂದು ಕಾರ್ಯಕರ್ತರು ಘೋಷಣೆ ಕೂಗಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry