ಬುಧವಾರ, ಮೇ 12, 2021
19 °C

ಯಡಿಯೂರಪ್ಪ ರಥಾರೋಹಣಕ್ಕೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ಭ್ರಷ್ಟಾಚಾರ ಆರೋಪ ಹೊತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ಷೇತ್ರ ದೇವತೆ ಹುಚ್ಚರಾಯಸ್ವಾಮಿ ರಥಾರೋಹಣ ಮಾಡಬಾರದೆಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬೆಳಿಗ್ಗೆ ಕುಟುಂಬ ಸದಸ್ಯರೊಂದಿಗೆ ಹುಚ್ಚರಾಯಸ್ವಾಮಿ ದೇವರಿಗೆ ಪೂಜೆ ಸಲ್ಲಿಸಲು ಆಗಮಿಸುತ್ತಿದ್ದಂತೆ 20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಯಡಿಯೂರಪ್ಪ ವಿರುದ್ಧ  ಘೋಷಣೆಗಳನ್ನು ಕೂಗುತ್ತಾ ರಥಾರೋಹಣ, ಪೂಜೆ ಮಾಡಲು ಬಿಡುವುದಿಲ್ಲ ಎಂದು ಪ್ರತಿಭಟನೆ ನಡೆಸಿದರು.ಭ್ರಷ್ಟಾಚಾರ ಆರೋಪದಿಂದಾಗಿ ಜೈಲುವಾಸ ಅನುಭವಿಸಿರುವ ಯಡಿಯೂರಪ್ಪ ಕ್ಷೇತ್ರದೇವತೆ ಪುಜೆ ಮಾಡಲು ಯೋಗ್ಯರಲ್ಲ. ಅಲ್ಲದೇ, ತಾಲ್ಲೂಕಿನಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ. ಇದನ್ನು ತನಿಖೆ ನಡೆಸಿ ಎಂದು ಆಗ್ರಹಿಸಿದರು.  

          

ತಾಲ್ಲೂಕು ಕಾಂಗ್ರೆಸ್ ಪ್ರತಿಭಟನೆ ನಡೆಸುವುದಾಗಿ ಪತ್ರಿಕಾ ಹೇಳಿಕೆ ನೀಡಿದ್ದರಿಂದಾಗಿ ಪೊಲೀಸರು ಹೆಚ್ಚಿನ ಭದ್ರತೆಗೆ ವ್ಯವಸ್ಥೆ ಮಾಡಿದ್ದರು. ಪ್ರತಿಭಟನಾಕಾರರನ್ನು ಮನವೊಲಿಸಿ ಶಾಂತರೀತಿಯಿಂದ ರಥೋತ್ಸವ ಜರುಗಲು ಅವಕಾಶ ಮಾಡಿಕೊಡಲು ಪ್ರತಿಭಟನಾಕಾರರ ಜತೆಗೆ ಮಾತನಾಡಿದರೂ ಫಲಿಸದಾಗ ಬಂಧಿಸಿ, ಬಿಡುಗಡೆಗೊಳಿಸಿದರು.ಕೆಪಿಸಿಸಿ ಸದಸ್ಯ ಶಾಂತವೀರಪ್ಪಗೌಡ, ಮುಖಂಡರಾದ ಗೋಣಿ ಮಾಲತೇಶ್, ಹುಲ್ಮಾರ್ ಮಹೇಶ್ ಮತ್ತಿತರರು ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.