ಯಡಿಯೂರಪ್ಪ- ರಾಜನಾಥ ಭೇಟಿ

7

ಯಡಿಯೂರಪ್ಪ- ರಾಜನಾಥ ಭೇಟಿ

Published:
Updated:

ಬೆಂಗಳೂರು: ಬುಧವಾರ ಸಂಜೆ ನಗರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಘಟಕದ ಮಾಜಿ ಅಧ್ಯಕ್ಷ ರಾಜನಾಥ ಸಿಂಗ್ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಸಮಾಲೋಚನೆ ನಡೆಸಿದರು.ಎರಡು ದಿನಗಳಿಂದ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಇದ್ದ ಯಡಿಯೂರಪ್ಪ ಬುಧವಾರ ರಾತ್ರಿ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.ಮೈಸೂರಿನ ಸುತ್ತೂರಿನಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ ಬಳಿಕ ಅವರು   ಗುರುವಾರ ನವದೆಹಲಿಗೆ ಹಿಂತಿರುಗಲಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry