ಯಡಿಯೂರಪ್ಪ, ಸಜ್ಜನ್ ಜಿಂದಾಲ್ ಬಂಧನಕ್ಕೆ ಆಗ್ರಹ

7

ಯಡಿಯೂರಪ್ಪ, ಸಜ್ಜನ್ ಜಿಂದಾಲ್ ಬಂಧನಕ್ಕೆ ಆಗ್ರಹ

Published:
Updated:

ಬಳ್ಳಾರಿ: `ಪ್ರೇರಣಾ ಶಿಕ್ಷಣ ಸಂಸ್ಥೆಗೆ ಅಪಾರ ಪ್ರಮಾಣದ ದೇಣಿಗೆ ಪಡೆದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ದೇಣಿಗೆ ನೀಡಿರುವ  ಜೆಎಸ್‌ಡಬ್ಲ್ಯೂ ಸ್ಟೀಲ್ಸ್ ಕಂಪೆನಿಯ ಮಾಲೀಕ ಸಜ್ಜನ್ ಜಿಂದಾಲ್ ಅವರನ್ನು ಕೂಡಲೇ ಬಂಧಿಸಬೇಕು~ ಎಂದು ಸಮಾಜ ಪರಿವರ್ತನ ಸಮುದಾಯದ ಎಸ್.ಆರ್. ಹಿರೇಮಠ ಒತ್ತಾಯಿಸಿದ್ದಾರೆ.ಈ ಪ್ರಕರಣದ ತನಿಖೆ ನಡೆಸಿರುವ ಸಿಬಿಐ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಅವರಿಬ್ಬರನ್ನೂ ತಕ್ಷಣ ಬಂಧಿಸಬೇಕು ಎಂದು ಗುರುವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಅಕ್ರಮ ಗಣಿಗಾರಿಕೆ, ಅದಿರು ಸಾಗಣೆ, ರಫ್ತು, ಅದಿರು ನಾಪತ್ತೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ, ತಪ್ಪಿತಸ್ಥರೆಲ್ಲರನ್ನೂ ಬಂಧಿಸುವ ಅಗತ್ಯವಿದೆ.ತೆರಿಗೆ ಕಳ್ಳತನವೂ ಒಳಗೊಂಡಂತೆ ಅಕ್ರಮಗಳ ಸರಣಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಿದೆ. ಅಕ್ರಮಕ್ಕೆ ಕುಮ್ಮಕ್ಕು ನೀಡಿರುವ ಅಧಿಕಾರಿಗಳ ವಿರುದ್ಧವೂ ತನಿಖೆ ನಡೆಸಬೇಕಿದೆ ಎಂದು ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry