ಶುಕ್ರವಾರ, ಆಗಸ್ಟ್ 7, 2020
25 °C

ಯಥಾಸ್ಥಿತಿ ಮುಂದುವರಿಕೆಗೆ ಆಗ್ರಹ

'ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಥಾಸ್ಥಿತಿ ಮುಂದುವರಿಕೆಗೆ ಆಗ್ರಹ

ಬೆಂಗಳೂರು: ಕೊರಮ, ಕೊರಚ, ಲಂಬಾಣಿ ಹಾಗೂ ಭೋವಿ ಜನಾಂಗಗಳನ್ನು ಪರಿಶಿಷ್ಟ ಜಾತಿಯಿಂದ ತೆಗೆದು ಹಾಕದೆ ಯಥಾಸ್ಥಿತಿಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಪುರಭವನದ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.ಭೋವಿ ಮಹಿಳಾ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷೆ ಪಿ.ಶಾಂತಾ ಮಾತನಾಡಿ, `ಕೊರಮ, ಕೊರಚ, ಲಂಬಾಣಿ ಮತ್ತು ಭೋವಿ ಜನಾಂಗಗಳು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಹೊಂದಿವೆ. ಹೀಗಾಗಿ, ಆ ಜನಾಂಗಗಳನ್ನು ಪರಿಶಿಷ್ಟ ಜಾತಿಗಳ ಗುಂಪಿನಿಂದ ತೆಗೆದುಹಾಕಬೇಕು ಎಂದು ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ, ವಾಸ್ತವವೆಂದರೆ, ಈ ಜನಾಂಗಗಳು ಬಲಾಢ್ಯರ ನಿಲುವುಗಳಿಂದ ಸೌಲಭ್ಯ ವಂಚಿತರಾಗುತ್ತಿದ್ದಾರೆ. ಹೀಗಾಗಿ ಭೋವಿ ಸೇರಿದಂತೆ ಇತರೆ ಜನಾಂಗಗಳನ್ನು ಪರಿಶಿಷ್ಟ ಜಾತಿಯಿಂದ ತೆಗೆದು ಹಾಕದೆ ಯಥಾ ಸ್ಥಿತಿಯನ್ನು ಮುಂದುವರಿಸಬೇಕು' ಎಂದು ಒತ್ತಾಯಿಸಿದರು.ಭೋವಿ ಜನಾಂಗ ಈಗಲೂ ಸಮಾಜದಲ್ಲಿ ಶೋಷಣೆಗೆ ಒಳಗಾಗುತ್ತಿದೆ. ಆದರೂ ಸರ್ಕಾರದ ಸೌಲಭ್ಯಗಳನ್ನು ಕಸಿದುಕೊಳ್ಳಲು ಕೆಲ ಸಮುದಾಯಗಳು ತಂತ್ರ ರೂಪಿಸುತ್ತಿವೆ. ಸ್ವಾತಂತ್ರ್ಯ ಬಂದ ನಂತರ ಪರಿಶಿಷ್ಟ ಜಾತಿಯಲ್ಲಿ ಯಾವ ಯಾವ ಜನಾಂಗದವರು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ, ಶೈಕ್ಷಣಿಕವಾಗಿ ಮುಂದುವರಿದಿದ್ದಾರೆ ಎಂಬುದನ್ನು ಅವಲೋಕಿಸಿದರೆ ಸರ್ಕಾರಕ್ಕೆ ಸತ್ಯಾಂಶ ತಿಳಿಯುತ್ತದೆ ಎಂದರು.ಕೊರಮ-ಕೊರಚ ಒಕ್ಕೂಟದ ಅಧ್ಯಕ್ಷ ಜಿ.ಮಾದೇಶ್ ಮಾತನಾಡಿ, `ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಕೇಂದ್ರ ಸರ್ಕಾರ ನೇರ ಸಾಲದ ಯೋಜನೆಯಡಿ ಪರಿಶಿಷ್ಟ ಜಾತಿಯ ಉಪಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಸಮುದಾಯಗಳಿಗೆ ಸಾಲ ಸೌಲಭ್ಯ ನೀಡದೆ ವಂಚಿಸಲಾಗಿದೆ. ಈ ಪ್ರಕರಣವನ್ನು ಸಿಐಡಿಗೆ ಒಪ್ಪಿಸಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸಬೇಕು' ಎಂದು ಅವರು ಆಗ್ರಹಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.