ಸೋಮವಾರ, ಮೇ 23, 2022
26 °C

ಯನಗುಂಟೆ: ಮಿಶ್ರ ತಳಿ ಹಸುಗಳ ಪ್ರದರ್ಶನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |ಹೊಸಕೋಟೆ: ತಾಲ್ಲೂಕಿನ ಯನಗುಂಟೆ ಗ್ರಾಮದಲ್ಲಿ ಬೆಂಗಳೂರು ಹಾಲು ಒಕ್ಕೂಟ ಮತ್ತು ಅಲ್ಲಿನ ಹಾಲು ಉತ್ಪಾದಕರ ಸಂಘದ ಸಹಯೋಗದಲ್ಲಿ ಮಿಶ್ರ ತಳಿ ಕರು, ಹಸುಗಳ ಪ್ರದರ್ಶನ  ಇತ್ತೀಚೆಗೆ ನಡೆಯಿತು.ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ಸಿ.ಮಂಜುನಾಥ್ ಇದನ್ನು ಉದ್ಘಾಟಿಸಿ ಮಾತನಾಡಿ, ಒಕ್ಕೂಟವು ಹಾಲು ಉತ್ಪಾದಕರಿಗೆ ಕಲ್ಯಾಣ ನಿಧಿ ಸೇರಿದಂತೆ ನಾನಾ ಸೌಲಭ್ಯಗಳನ್ನು ಕಲ್ಪಿಸಿದೆ. ಅದರಂತೆ ಯಶಸ್ವಿನಿ ಯೋಜನೆಗೆ 2 ಕೋಟಿ, ವಿಮಾ ಯೋಜನೆಗೆ 5 ಕೋಟಿ ರೂ. ಮೀಸಲಿರಿಸಿದೆ. ಬರುವ ಏಪ್ರಿಲ್‌ನಿಂದ ವಿಮಾ ಪರಿಹಾರ ಧನವನ್ನು ಹೆಚ್ಚಿಸಲಾಗುತ್ತದೆ ಎಂದರು. ಅಪಘಾತದಲ್ಲಿ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಧನ ನೀಡಲಾಗುವುದು. ಉತ್ಪಾದಕರು ತಪ್ಪದೆ  ಹೆಸರು ನೋಂದಾಯಿಸಿಕೊಳ್ಳಬೇಕು ಎಂದರು.ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಪಶು ವೈದ್ಯಕೀಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ವಿ.ಎನ್.ವಿಶ್ವನಾಥ ರೆಡ್ಡಿ ಮಾತನಾಡಿದರು.ಜಿ.ಪಂ. ಸದಸ್ಯೆ ವೆಂಕಟಲಕ್ಷ್ಮಮ್ಮ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಿ.ಎಲ್.ಮಂಜುನಾಥ್, ಗ್ರಾ.ಪಂ. ಸದಸ್ಯ ವೈ.ಸಿ.ಶ್ರೀನಿವಾಸ್, ಒಕ್ಕೂಟದ ವ್ಯವಸ್ಥಾಪಕ ಡಾ.ಶ್ರೀನಿವಾಸಮೂರ್ತಿ, ಬಿ.ಜಿ.ನಾರಾಯಣ ಗೌಡ ಉಪಸ್ಥಿತರಿದ್ದರು. ಡಿ.ಕೆ. ಸೊಣ್ಣೇಗೌಡ ಸ್ವಾಗತಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.