ಮಂಗಳವಾರ, ಮೇ 24, 2022
25 °C

ಯಲಬುರ್ಗಾ ತಾ.ಪಂ. ಅಧ್ಯಕ್ಷರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಬುರ್ಗಾ: ತಾಲ್ಲೂಕು ಪಂಚಾಯತಿ ಅಧ್ಯಕ್ಷರಾಗಿ ನೀಲಮ್ಮ ಕೊಟ್ರಪ್ಪ ಜವಳಿ ಹಾಗೂ ಉಪಾಧ್ಯಕ್ಷರಾಗಿ ಹೊಳೆಗೌಡ ಮುದೇಗೌಡ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಹಾಯಕ ಆಯುಕ್ತ ಎಂ. ಶರಣಬಸಪ್ಪ ಚುನಾವಣಾ ಪ್ರಕ್ರಿಯೆ ನಡೆಸಿಕೊಟ್ಟರು. ಅಧ್ಯಕ್ಷಸ್ಥಾನಕ್ಕೆ ಮೀಸಲಿದ್ದ ಹಿಂದುಳಿದ ವರ್ಗ ‘ಬ’ ಮಹಿಳೆ ಸ್ಥಾನಕ್ಕೆ  ಬೆಣಕಲ್ಲ ಕ್ಷೇತ್ರದ ಬಿಜೆಪಿ ಸದಸ್ಯೆ ನೀಲಮ್ಮ ಜವಳಿ, ಉಪಾಧ್ಯಕ್ಷ ಸ್ಥಾನಕ್ಕೆ ಮುರಡಿ ಕ್ಷೇತ್ರದ ಹೊಳೆಗೌಡ ಅವರ ಆಯ್ಕೆಯನ್ನು ಘೋಷಿಸಲಾಯಿತು.

ಒಟ್ಟು 23 ಸದಸ್ಯ ಬಲದ ತಾಲ್ಲೂಕು ಪಂಚಾಯಿತಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಲಾ 10 ಸ್ಥಾನಗಳಿಂದ ಸಮಬಲ ಹೊಂದಿದ್ದವು. ಇಬ್ಬರು ಪಕ್ಷೇತರರು ಮತ್ತು ಒಬ್ಬ ಜೆಡಿಎಸ್ ಸದಸ್ಯರ ಬೆಂಬಲ ಪಡೆಯುವ ಮೂಲಕ ಬಿಜೆಪಿ, ತಾಲ್ಲೂಕು ಪಂಚಾಯಿತಿ ಇತಿಹಾಸದಲ್ಲಿ ಪ್ರಥಮ ಬಾರಿಗೆ ಆಡಳಿತ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಯಿತು.ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಮನೋಜಕುಮಾರ, ತಹಸೀಲ್ದಾರ್ ಈ.ಡಿ. ಭೃಂಗಿ, ಸಿಪಿಐ ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.