ಶುಕ್ರವಾರ, ಮೇ 7, 2021
27 °C

ಯಲಹಂಕ: ಉಚಿತ ಆರೋಗ್ಯ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ನಾರಾಯಣ ಹೃದಯಾಲಯ, ಅಂಬೇಡ್ಕರ್ ವೈದ್ಯಕೀಯ ಕಾಲೇಜು ಹಾಗೂ ಎಂ.ಎಸ್.ರಾಮಯ್ಯ ಆಸ್ಪತ್ರೆಗಳ ಸಂಯುಕ್ತ ಆಶ್ರಯದಲ್ಲಿ ಉಪನಗರ 4ನೇ ಹಂತದಲ್ಲಿರುವ ಜಿ.ಕೆ.ನಾಯ್ಡು ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.ಶಿಬಿರದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಶಾಸಕ ಎಸ್.ಆರ್.ವಿಶ್ವನಾಥ್, `ಇತ್ತೀಚಿನ ದಿನಗಳಲ್ಲಿ ಒತ್ತಡದ ಜೀವನ ಹಾಗೂ ಬದಲಾದ ಆಹಾರ ಪದ್ಧತಿ ಯಿಂದ ಮನುಷ್ಯನು ಅನೇಕ ಕಾಯಿಲೆಗಳಿಗೆ ಒಳಗಾಗುತ್ತಿದ್ದಾನೆ. ಈ ದಿಸೆಯಲ್ಲಿ ಮುಂಜಾಗ್ರತೆ ಕ್ರಮಗಳನ್ನು ಅನುಸರಿಸಿ, ಸರಿಯಾದ ಸಮಯಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು~ ಎಂದು ಸಲಹೆ ನೀಡಿದರು.ಶಿಬಿರದಲ್ಲಿ ಹೃದಯ, ಕಣ್ಣು, ದಂತ, ಸ್ತ್ರೀರೋಗ ಹಾಗೂ ಮಕ್ಕಳ ಕಾಯಿಲೆಗೆ ಸಂಬಂಧಿಸಿದಂತೆ ವೈದ್ಯರು ತಪಾಸಣೆ ನಡೆಸಿದರು. ಇದೇ ಸಂದರ್ಭದಲ್ಲಿ 121 ಜನರಿಗೆ ಉಚಿತವಾಗಿ ಕನ್ನಡಕ ವಿತರಿಸಲಾಯಿತು. ಒಟ್ಟು 440 ಮಂದಿ ಪ್ರಯೋಜನ ಪಡೆದರು.ನಿಸರ್ಗ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಶಿಬಿರವನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಸದಸ್ಯೆ ವಾಣಿಶ್ರೀ ವಿಶ್ವನಾಥ್, ಬಿಬಿಎಂಪಿ ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷೆ ಡಾ.ಗೀತಾಶಶಿಕುಮಾರ್, ಬೆಂಗಳೂರು ಹಾಲು ಒಕ್ಕೂಟದ ಅಧ್ಯಕ್ಷ ದಿಬ್ಬೂರು ಜಯಣ್ಣ, ಬಿಜೆಪಿ ಮುಖಂಡ ಡಾ.ಶಶಿಕುಮಾರ್ ಮೊದಲಾದವರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.