ಶನಿವಾರ, ಅಕ್ಟೋಬರ್ 19, 2019
28 °C

ಯಲಹಂಕ: ವಿಶೇಷ ಪೂಜೆ ಸಲ್ಲಿಕೆ

Published:
Updated:

ಯಲಹಂಕ: ಉಪನಗರದ ಶ್ರೀನಿವಾಸ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೆಂಕಟರಮಣಸ್ವಾಮಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ಸ್ವಾಮಿಗೆ ವಿವಿಧ ರೀತಿಯ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ತೋಮಾಲೆ ಸೇವೆ ಸೇರಿದಂತೆ ಹಲವಾರು ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಬೆಳಿಗ್ಗೆಯಿಂದಲೇ ಭಾರಿ ಸಂಖ್ಯೆಯಲ್ಲಿ ದೇವಾಲಯಕ್ಕೆ ಆಗಮಿಸಿದ ಭಕ್ತರು, ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದರು.ಶಾಸಕ ಎಸ್.ಆರ್.ವಿಶ್ವನಾಥ್, ಜಿ.ಪಂ.ಸದಸ್ಯೆ ವಾಣಿಶ್ರೀ ವಿಶ್ವನಾಥ್, ಬಿಬಿಎಂಪಿ ಸ್ಥಾಯಿ ಸಮಿತಿ ಅಧ್ಯಕ್ಷೆ ಡಾ.ಗೀತಾ ಶಶಿಕುಮಾರ್, ಪಾಲಿಕೆ ಸದಸ್ಯರಾದ ಎಂ.ಮುನಿರಾಜು, ವೈ.ಎನ್.ಅಶ್ವಥ್, ಉಪನಗರ ವಾರ್ಡ್ ಬಿಜೆಪಿ ಅಧ್ಯಕ್ಷ ಸತೀಶ್ ಮೊದಲಾದವರು ಭಾಗವಹಿಸಿದ್ದರು.

Post Comments (+)