ಶನಿವಾರ, ಮೇ 21, 2022
25 °C
ಪಾಂಡವಪುರ ತಾಲ್ಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ

ಯಶಸ್ವಿಗೆ ಸಕಲ ಸಿದ್ಧತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಂಡವಪುರ: ತಾಲ್ಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನವು ಜುಲೈ 6ರಂದು ಪಟ್ಟಣದ ಟಿಎಪಿಸಿಎಂಸ್ ರೈತ ಸಭಾಂಗಣದಲ್ಲಿ ನಡೆಯಲಿದ್ದು, ಸಮ್ಮೇಳನದ ಯಶಸ್ವಿಗೆ ಸಕಲ ಸಿದ್ದತೆ ನಡೆದಿದೆ.ಸಮ್ಮೇಳನ ನಡೆಯುವ ವೇದಿಕೆಯ ಮಹಾದ್ವಾರಕ್ಕೆ ಡಾ.ಬಾಲಗಂಗಾಧರನಾಥಸ್ವಾಮೀಜಿ, ಮಹಾಮಂಟಪಕ್ಕೆ ಡಿ. ಹಲಗೇಗೌಡ ಹಾಗೂ ವೇದಿಕೆಗೆ ಎಚ್. ನಂಜೇಗೌಡ ಅವರ ಹೆಸರಿಡಲಾಗಿದೆ. ಅಂದು ಬೆಳಿಗ್ಗೆ 8 ಗಂಟೆಗೆ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ರಾಷ್ಟ್ರಧ್ವಜಾರೋಹಣ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ ಪರಿಷತ್ತಿನ ಧ್ವಜಾರೋಹಣ ಹಾಗೂ ತಾಲ್ಲೂಕು ಅಧ್ಯಕ್ಷ ಎಚ್.ಆರ್. ಧನ್ಯಕುಮಾರ್ ನಾಡ ಧ್ವಜಾರೋಹಣ ನೆರವೇರಿಸುವರು.ಪಿಇಎಸ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಗೀತೆ ಮತ್ತು ನಾಡಗೀತೆ ಹಾಡಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ಎಂ. ರಾಮಕೃಷ್ಣ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.ಬೆಳಿಗ್ಗೆ 10.30ಕ್ಕೆ ಸಮ್ಮೇಳನದ ಉದ್ಘಾಟನಾ ಸಮಾರಂಭ ಜರುಗಲಿದೆ. ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಲಿದ್ದು, ಮೀರಾ ಶಿವಲಿಂಗಯ್ಯ ಆಶಯ ನುಡಿಗಳನ್ನಾಡುವರು. ಸಾಹಿತಿ-ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಉದ್ಘಾಟನೆ ನೆರವೇರಿಸುವರು. ಪುಸ್ತಕ ಮಳಿಗೆಯನ್ನು ಮಾಜಿ ಶಾಸಕ ಸಿ.ಎಸ್. ಪುಟ್ಟರಾಜು ಉದ್ಘಾಟಿಸುವರು.ಪ್ರೊ.ಬಿ. ಜಯಪ್ರಕಾಶ್‌ಗೌಡ ಸಮ್ಮೇಳನಾಧ್ಯಕ್ಷ ಪರಿಚಯ ಮಾಡಿಕೊಡಲಿದ್ದಾರೆ. ಸಾಹಿತಿ ಪಿ. ಅಬ್ದುಲ್ ಸತ್ತಾರ್ ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಗಳನ್ನಾಡಲಿದ್ದು, ಪ್ರೊ.ಬಿ. ನಾರಾಯಣಗೌಡ ಸಮ್ಮೇಳನಾಧ್ಯಕ್ಷರ ಭಾಷಣ ಮಾಡುವರು.ಮಧ್ಯಾಹ್ನ 12.30ಕ್ಕೆ ಜರುಗುವ ಸಾಹಿತ್ಯ ಮತ್ತು ಸಂಸ್ಕೃತಿ ಕುರಿತ ವಿಚಾರಗೋಷ್ಠಿಯನ್ನು ಲೇಖಕ ಡಾ.ಬೋರೇಗೌಡ ಚಿಕ್ಕಮರಳಿ ಉದ್ಪಾಟಿಸಲಿದ್ದು, ಜಾನಪದ ತಜ್ಞ ಕ್ಯಾತನಹಳ್ಳಿ ರಾಮಣ್ಣ ಅಧ್ಯಕ್ಷತೆ ವಹಿಸುವರು.ಸಹಾಯಕ ಪ್ರಾಧ್ಯಾಪಕರಾದ ಶಿಲ್ಪಶ್ರೀ, ಡಾ.ಪಿ. ಬೆಟ್ಟೇಗೌಡ, ರೈತ ಮುಖಂಡ ನಂಜುಂಡೇಗೌಡ ಹಾಗೂ ಪತ್ರಕರ್ತ ಹಾರೋಹಳ್ಳಿ ಪ್ರಕಾಶ್ ವಿಷಯ ಮಂಡಿಸುವರು. ಮಧ್ಯಾಹ್ನ 2.30ಕ್ಕೆ ಕವಿಗೋಷ್ಠಿ ನಡೆಯಲಿದ್ದು, ಉಪನ್ಯಾಸಕ ಡಾ.ಡಿ. ಗುರುಮೂರ್ತಿ ಅಧ್ಯಕ್ಷತೆ ವಹಿಸುವರು, ಜಾನಪದ ತಜ್ಞೆ ಡಾ.ಜಯಲಕ್ಷ್ಮಿ ಸೀತಾಪುರ ಉದ್ಪಾಟಿಸಲಿದ್ದಾರೆ. ಸುಮಾರು 20 ಕವಿಗಳು ಕವಿತೆ ವಾಚಿಸಲಿದ್ದಾರೆ.ಸಂಜೆ 5 ಗಂಟೆಗೆ ಸಾಧಕರಿಗೆ ಸನ್ಮಾನ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಪ್ರಾಧ್ಯಾಪಕ ಎಂ.ಕೃಷ್ಣೇಗೌಡ ಸಮಾರೋಪ ಭಾಷಣ ಮಾಡುವರು. ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಸಾಧಕರಿಗೆ ಸನ್ಮಾನ ಹಾಗೂ ಮೀರಾಶಿವಲಿಂಗಯ್ಯ ಅವರು ಸಮ್ಮೇಳನಾಧ್ಯಕ್ಷರಿಗೆ ಸನ್ಮಾನ ನೆರವೇರಿಸುವರು. ಶಾಸಕ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು.ಸಮ್ಮೇಳನದಲ್ಲಿ ಭಾಗವಹಿಸುವ  ನೌಕರರಿಗೆ ಒಒಡಿ ಸೌಲಭ್ಯ ಒದಗಿಸಲಾಗಿದ್ದು, ಉಚಿತ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸಾಹಿತ್ಯಾಸಕ್ತರು ಹಾಗೂ ತಾಲ್ಲೂಕಿನ ಜನತೆ ಸಮ್ಮೇಳನದಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಪರಿಷತ್ತಿನ ಅಧ್ಯಕ್ಷ ಎಚ್.ಆರ್. ಧನ್ಯಕುಮಾರ್ ಕೋರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.