ಮಂಗಳವಾರ, ಮೇ 18, 2021
22 °C

ಯಶಸ್ವಿನಿ ಯೋಜನೆಯಡಿ ಸೌಲಭ್ಯ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಡುಗೆ ಕೆಲಸಗಾರರಿಗೆ ಯಶಸ್ವಿನಿ ಯೋಜನೆಯಡಿ ಆರೋಗ್ಯ ತಪಾಸಣಾ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಜಾಮೀನು ರಹಿತ ಸಾಲ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಡುಗೆ ಕೆಲಸಗಾರರ ಮತ್ತು ಸಹಾಯಕ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಾಧ್ಯಕ್ಷ ಸತ್ಯನಾರಾಯಣ ನುಡಿದರು.ನಗರದಲ್ಲಿ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯದಾದ್ಯಂತ 10 ಲಕ್ಷಕ್ಕೂ ಅಧಿಕ ಮಂದಿ ಅಡುಗೆ ಕೆಲಸ ನಿರ್ವಹಿಸುತ್ತಿದ್ದಾರೆ. ಕೆಲಸಗಾರರ ಕಲ್ಯಾಣ ಮಂಡಳಿ ನೇಮಕ ಮಾಡಿಕೊಳ್ಳಬೇಕು~ ಎಂದರು.ಮೊದಲ ಬಾರಿಗೆ ರಾಜ್ಯಮಟ್ಟದ ಸಮಾವೇಶವನ್ನು ಸೆ. 26ರಂದು ನಗರದ ಚಾಮರಾಜಪೇಟೆಯಲ್ಲಿ ಏರ್ಪಡಿಸಲಾಗುತ್ತಿದ್ದು, ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಚಿವರಾದ ಎಸ್.ಸುರೇಶ್‌ಕುಮಾರ್, ಬಿ.ಎನ್.ಬಚ್ಚೇಗೌಡ ಭಾಗವಹಿಸಲಿದ್ದಾರೆ. ಜೆಡಿಎಸ್ ಕಾರ್ಯಾಧ್ಯಕ್ಷ ಪಿ.ಜಿ.ಆರ್.ಸಿಂಧ್ಯ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.