ಮಡಿಕೇರಿ: ಯಶಸ್ವಿನಿ ಸಹಕಾರಿ ರೈತರ ಆರೋಗ್ಯ ರಕ್ಷಣಾ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಸಹಕಾರಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾವನೆ ಬಂದಿರುವ ಆಸ್ಪತ್ರೆಗಳನ್ನು ‘ಯಶಸ್ವಿನಿ’ ಯೋಜನೆಗೆ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ. ನಗರದ ಜಿಲ್ಲಾ ಕೇಂದ್ರ ಬ್ಯಾಂಕ್ನ ಆಡಳಿತ ಮಂಡಳಿ ಸಭಾಂಗಣದಲ್ಲಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮತ್ತು ಯಶಸ್ವಿನಿ ರಕ್ಷಣಾ ಯೋಜನೆಯ ಜಿಲ್ಲಾ ಸಮಿತಿಯ ಅಧ್ಯಕ್ಷ ಎಂ.ಎ. ರಮೇಶ್ ಅಧ್ಯಕ್ಷತೆಯಲ್ಲಿ ನಡೆದ ಯಶಸ್ವಿನಿ ಸಹಕಾರಿ ರೈತ ಆರೋಗ್ಯ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲೆಯಲ್ಲಿ ಈಗಾಗಲೇ ಮಡಿಕೇರಿಯ ಜಿಲ್ಲಾಸ್ಪತ್ರೆ , ವೈವಾಸ್, ವಿರಾಜಪೇಟೆಯ ಆತ್ರೇಯ ಆಸ್ಪತ್ರೆಗಳಲ್ಲಿ ಸಹಕಾರಿ ಸದಸ್ಯರಿಗೆ ಯಶಸ್ವಿನಿ ಯೋಜನೆಯಡಿ ಉಚಿತ ಆರೋಗ್ಯ ಸೇವೆ ನೀಡಲಾಗುತ್ತಿದ್ದು, ಗ್ರಾಮೀಣ ಸಹಕಾರಿಗಳಿಗೆ ಇನ್ನೂ ಹೆಚ್ಚಿನ ಆರೋಗ್ಯ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಸೋಮವಾರಪೇಟೆಯ ಸರ್ಕಾರಿ ಆಸ್ಪತ್ರೆ, ಅಮ್ಮತ್ತಿಯ ಗ್ರಾಮೀಣ ಭಾರತ ಆರೋಗ್ಯ ಯೋಜನೆಯ ಆಸ್ಪತ್ರೆ, ಗೋಣಿಕೊಪ್ಪಲಿನ ಲೈಫ್ ಲೈನ್ ಆಸ್ಪತ್ರೆಗಳಿಂದ ಪ್ರಸ್ತಾವನೆ ಬಂದಿದೆ. ಈ ಆಸ್ಪತ್ರೆಗಳನ್ನು ಕೂಡ ಯಶಸ್ವಿನಿ ಯೋಜನೆಯಡಿ ಸೇರಿಸಲು ಅನುಮೋದನೆ ನೀಡಲಾಯಿತು. ಹಾಗೆಯೇ, ಮಡಿಕೇರಿಯ ಆಶ್ವಿನಿ ಆಸ್ಪತ್ರೆಯಿಂದಲೂ ಪ್ರಸ್ತಾವನೆ ಬಂದಲ್ಲಿ ಪರಿಗಣಿಸಲಾಗುವುದು ಎಂದು ರಮೇಶ್ ತಿಳಿಸಿದರು.

ಯಶಸ್ವಿನಿ ಕಾರ್ಡ್ ಹೊಂದಿದ ರೋಗಿಗಳಿಗೆ ಉಚಿತ ಆರೋಗ್ಯ ಸೇವೆ ಒದಗಿಸಬೇಕು. ಸರ್ಕಾರದ ನಿರ್ದೇಶನ ಪಾಲಿಸಬೇಕು ಎಂದು ಯಶಸ್ವಿನಿ ರಕ್ಷಣಾ ಯೋಜನೆಯ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ರಮೇಶ್ ಸಂಬಂಧಪಟ್ಟ ಆಸ್ಪತ್ರೆಗಳ ವ್ಯವಸ್ಥಾಪಕರಿಗೆ ನಿರ್ದೇಶನ ನೀಡಿದರು. ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎಂ.ಪಿ. ಮುತ್ತಪ್ಪ ಮಾತನಾಡಿ, ಯಶಸ್ವಿನಿ ಯೋಜನೆಯಡಿ ನೋಂದಣಿಯಾಗಿರುವ ಆಸ್ಪತ್ರೆಗಳಲ್ಲಿ ಯಶಸ್ವಿನಿ ಗುರುತಿನ ಚೀಟಿ ಹೊಂದಿದ ಸಹಕಾರಿಗಳಿಗೆ ಉಚಿತ ಚಿಕಿತ್ಸೆ ನೀಡದೆ ಸತಾಯಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ ಎಂದು ಸಭೆಯ ಗಮನಸೆಳೆದರು.

ಇದಕ್ಕೆ ಪ್ರತಿಕ್ರಿಯಿಸಿದ ಸಹಕಾರ ಸಂಘಗಳ ಉಪ ನಿಬಂಧಕ ಗುರುಸ್ವಾಮಿ, ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಪಾಲಿಸಬೇಕು. ಇಲ್ಲದಿದ್ದರೆ ಅಂತಹ ಆಸ್ಪತ್ರೆಗಳನ್ನು ಯಶಸ್ವಿನಿ ಯೋಜನೆಯ ನೋಂದಣಿ ಪಟ್ಟಿಯಿಂದ ಹೊರಗಿಡಲಾಗುವುದು ಎಂದರು. ‘ವೈವಾಸ್’ ಆಸ್ಪತ್ರೆಯ ವ್ಯವಸ್ಥಾಪಕರು ಪ್ರತಿಕ್ರಿಯಿಸಿ, ಆಸ್ಪತ್ರೆಯಲ್ಲಿ ವೈದ್ಯರು ಹೊರಗಿನಿಂದ ಬಂದು ಸೇವೆ ಸಲ್ಲಿಸುತ್ತಿದ್ದಾರೆ. ಆದರೆ, ಔಷಧಿ ಹಾಗೂ ಇತರ ಉಪಕರಣಗಳನ್ನು ಹೊರಗಿನಿಂದ ತರಿಸಬೇಕಾಗಿದೆ. ಆದ್ದರಿಂದ ನಿಯಮಗಳಲ್ಲಿ ಕೆಲವೊಂದು ಮಾರ್ಪಾಡು ತರಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಂ.ಎ. ರಮೇಶ್, ಯಶಸ್ವಿನಿ ಯೋಜನೆಯಡಿ ನೋಂದಣಿಯಾಗಿರುವ ಆಸ್ಪತ್ರೆಗಳನ್ನು ಕೈಬಿಡುವುದು ನಮ್ಮ ಉದ್ದೇಶವಲ್ಲ. ಆದರೆ, ಸಹಕಾರಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಬೇಕು. ಆಸ್ಪತ್ರೆಯ ಸಮಸ್ಯೆಗಳನ್ನು ಸುಧಾರಣೆ ಮಾಡಿಕೊಂಡು ರೋಗಿಗಳಿಗೆ ಆರೋಗ್ಯ ಸೌಲಭ್ಯ ಒದಗಿಸಲು ಮುಂದಾಗಬೇಕು ಎಂದು ಕೋರಿದರು. ಪ್ರಸಕ್ತ ಸಾಲಿನಲ್ಲಿ ನೋಂದಣಿಯಾಗಿರುವ 49,520 ಮಂದಿ ಸದಸ್ಯರಲ್ಲಿ ಸುಮಾರು 400 ಮಂದಿ ಫಲಾನುಭವಿಗಳು 44.54 ಲಕ್ಷ ರೂಪಾಯಿ ವೆಚ್ಚದ ಚಿಕಿತ್ಸಾ ಸೌಲಭ್ಯ ಪಡೆದಿದ್ದಾರೆ. ಹಾಗೆಯೇ, 165 ಮಂದಿ ಹೊರ ರೋಗಿಗಳಾಗಿ ಯಶಸ್ವಿನಿ ಸೌಲಭ್ಯ ಪಡೆದಿದ್ದು, ಇವರ ವೈದ್ಯಕೀಯ ವೆಚ್ಚವನ್ನು ಭರಿಸಲಾಗಿದೆ ಎಂದು ಗುರುಸ್ವಾಮಿ ತಿಳಿಸಿದರು.

ಸಹಕಾರಿ ಸಂಘದ ಪ್ರತಿಯೊಬ್ಬ ಸದಸ್ಯರಿಗೆ ವಾರ್ಷಿಕ ವಂತಿಗೆಯನ್ನು 150ರಿಂದ 160 ರೂಪಾಯಿಗೆ ಹೆಚ್ಚಿಸಲಾಗಿದ್ದು, ಹೆಚ್ಚಳ ಮಾಡಲಾಗಿರುವ 10 ರೂಪಾಯಿಗಳನ್ನು ಆಯಾಯ ಸಹಕಾರ ಸಂಘಗಳು ಬ್ಯಾಂಕುಗಳು ಹಾಗೂ ಬ್ಯಾಂಕುಗಳು ಹಂಚಿಕೆ ಮಾಡಿಕೊಳ್ಳಬೇಕು ಎಂದು ರಮೇಶ್ ಸೂಚಿಸಿದರು. ಇದಕ್ಕೆ ದನಿಗೂಡಿಸಿದ ಸಹಕಾರ ಸಂಘಗಳ ಉಪ ನಿಬಂಧಕ ಗುರುಸ್ವಾಮಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಹಕಾರಿ ಸದಸ್ಯರಿಗೆ ವಾರ್ಷಿಕ ವಂತಿಗೆಯನ್ನು ಸರ್ಕಾರವೇ ನೀಡಲು ಚಿಂತನೆ ನಡೆಸಿದ್ದು, ಆದೇಶ ಹೊರಬಿದ್ದರೆ ಸಹಕಾರಿ ಸಂಘಗಳಿಗೆ ಹೆಚ್ಚಿನ ಹೊರೆಯಾಗುವುದಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ಉಪ ನೋಂದಣಾಧಿಕಾರಿ ಪಿ.ಎಲ್. ಜ್ಯೋತೀಂದ್ರ, ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಭಿವೃದ್ಧಿ ಅಧಿಕಾರಿ ಪಿ. ಮಹದೇವಯ್ಯ, ಯಶಸ್ವಿನಿ ಯೋಜನೆಯ ಸಂಯೋಜಕ ಚೇತನ ಹಾಗೂ ಯಶಸ್ವಿನಿ ಯೋಜನೆಗೆ ಒಳಪಟ್ಟಿರುವ ಆಸ್ಪತ್ರೆಗಳ ವ್ಯವಸ್ಥಾಪಕರು ಸಭೆಯಲ್ಲಿ ಹಾಜರಿದ್ದರು. ಸದಸ್ಯತ್ವಕ್ಕೆ ಅವಕಾಶ: 2011-12ನೇ ಸಾಲಿಗೆ ಗ್ರಾಮೀಣ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಪಡೆದು ಆರು ತಿಂಗಳಾಗಿರುವ ಕಾಫಿ ತೋಟಗಳ ಕಾರ್ಮಿಕರು, ಗ್ರಾಮೀಣ ಪತ್ರಕರ್ತರು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಕೃಷಿ ಕ್ಷೇತ್ರದಿಂದ ಆಯ್ಕೆಯಾಗಿರುವ ರೈತ ಪ್ರತಿನಿಧಿಗಳು, ಗ್ರಾಮೀಣ ಪ್ರದೇಶದ ಚಲನಚಿತ್ರ, ರಂಗಭೂಮಿ, ಜಾನಪದ ಕಲಾವಿದರು, ಅಲೆಮಾರಿಗಳು, ಗ್ರಾಮೀಣ ಸ್ವಸಹಾಯ ಗುಂಪು ಹಾಗೂ ಸ್ತ್ರೀಶಕ್ತಿ ಗುಂಪುಗಳ ಸದಸ್ಯರು ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ (ಮಂಗಳ ಮುಖಿಯರು) ಯಶಸ್ವಿನಿ ಯೋಜನೆಯಡಿ ಸದಸ್ಯತ್ವ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಕಾರ ಸಂಘಗಳ ನಿಬಂಧಕರು ಸಭೆಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.