ಸೋಮವಾರ, ಮೇ 10, 2021
25 °C

ಯಶಸ್ಸಿಗೆ ಶ್ರಮ ಅವಶ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವ್ಯಕ್ತಿ ಬದುಕಿನಲ್ಲಿ ಯಶಸ್ಸು ಕಾಣಲು ಕಠಿಣ ಪರಿಶ್ರಮ ಅವಶ್ಯಕ. ಯಶಸ್ಸಿನ ಮೂಲ ಮಂತ್ರವೇ ಪರಿಶ್ರಮ~ ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ.ಎಚ್.ಡಿ. ಮಹೇಶಪ್ಪ ಇಲ್ಲಿ ಅಭಿಪ್ರಾಯಪಟ್ಟರು.ಆಚಾರ್ಯ ತಾಂತ್ರಿಕ ಕಾಲೇಜಿನಲ್ಲಿ ಭಾನುವಾರ ಆಯೋಜಿಸಿದ್ದ 2011-12ನೇ ಸಾಲಿನ ಪ್ರಥಮ ವರ್ಷದ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು. `ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಮೆಟ್ಟಿಲೇರಲು ಶ್ರಮ ಮುಖ್ಯ. ಶ್ರಮ ವಹಿಸದೇ ಯಾವುದೇ ಫಲ ಪಡೆಯಲು ಅಸಾಧ್ಯ. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಗಳನ್ನು ಮುಂದಿಟ್ಟುಕೊಂಡು ಶ್ರಮ ಪಡಬೇಕು~ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.ವಿಶ್ವವಿದ್ಯಾಲಯವು ತನ್ನ ಎಲ್ಲ ಪ್ರಾದೇಶಿಕ ಕೇಂದ್ರಗಳಲ್ಲಿ ಇನ್ ಕ್ಯೂಬ್ ಶನ್ ಕೇಂದ್ರಗಳನ್ನು ತೆರೆದಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ತರಬೇತಿ ನೀಡಲಾಗುವುದು. ಯುವಕರು ಈ ಅವಕಾಶವನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಹೇಳಿದರು.ಇದೇ ವೇಳೆ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಆಚಾರ್ಯ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಿ.ಎಂ.ರೆಡ್ಡಿ ಇತರರು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.