ಬುಧವಾರ, ಮೇ 25, 2022
25 °C

ಯಾದಗಿರಿ: ಬರಗಾಲ ಘೋಷಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಬರಗಾಲ ಘೋಷಿಸಲು ಆಗ್ರಹ

ಯಾದಗಿರಿ: ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಯಾದಗಿರಿಯನ್ನು ಸೇರ್ಪಡೆ ಮಾಡುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಸಕ ಬಾಬುರಾವ ಚಿಂಚನಸೂರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.  ಇಲ್ಲಿನ ಕಾಂಗ್ರೆಸ್ ಕಚೇರಿಯಿಂದ ಮೆರವಣಿಗೆ ಆರಂಭಿಸಿದ ಕಾರ್ಯಕರ್ತರು, ಅಂಬೇಡ್ಕರ್ ವೃತ್ತದ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದರು. ನಂತರ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಬಾಬುರಾವ ಚಿಂಚನಸೂರ, ಜಿಲ್ಲೆಯ ಗುರುಮಠಕಲ್ ಕ್ಷೇತ್ರವು ಅತ್ಯಂತ ಹಿಂದುಳಿದಿದ್ದು, ತಾಲ್ಲೂಕಿನಲ್ಲಿ ಸಕಾಲಕ್ಕೆ ಮಳೆ ಆಗದೇ ಮುಂಗಾರು ಸಂಪೂರ್ಣ ವಿಫಲವಾಗಿದೆ. ಬರಗಾಲದ ಛಾಯೆ ಆವರಿಸಿರುವುದರಿಂದ ರೈತಾಪಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ರೈತರ ತೊಂದರೆ ನಿವಾರಿಸಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.ಯಾದಗಿರಿ ತಾಲ್ಲೂಕಿನಲ್ಲಿ ಒಣಕೃಷಿಯನ್ನೇ ಅವಲಂಬಿಸಿರುವ ರೈತಾಪಿ ಜನರು ಸಂಕಷ್ಟದಲ್ಲಿದ್ದಾರೆ. ಕೂಡಲೇ ಯಾದಗಿರಿ ತಾಲ್ಲೂಕನ್ನು ಬರಪೀಡಿತ ಎಂದು ಘೋಷಿಸಬೇಕು. ಬರಗಾಲ ಪರಿಹಾರ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.ಸಮರ್ಪಕ ವಿದ್ಯುತ್ ಸರಬರಾಜು ಇಲ್ಲದೇ ಪಂಪ್‌ಸೆಟ್‌ಗಳು ಸ್ಥಗಿತಗೊಂಡು ಬೆಳೆಗಳು ಸಂಪೂರ್ಣ ಒಣಗಿ ಹೋಗಿವೆ. ಜನರು, ಜಾನುವಾರುಗಳು ನೀರಿನ ತೊಂದರೆ ಅನುಭವಿಸುವಂತಾಗಿದೆ. ಸಮರ್ಪಕ ವಿದ್ಯುತ್ ಸರಬರಾಜು ಮಾಡಬೇಕು. ತಾಲ್ಲೂಕಿನಲ್ಲಿ ಬಿಪಿಎಲ್ ಕಾರ್ಡ್‌ಗಳು, ಪಡಿತರ ಚೀಟಿಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ವಿತರಣೆ ಆಗಿಲ್ಲ. ಬಡವರು ತೊಂದರೆ ಅನುಭವಿಸಬೇಕಾಗಿದೆ. ಸಮಸ್ಯೆಗಳನ್ನು ನಿವಾರಿಸಿ, ಕೂಡಲೇ ಫಲಾನುಭವಿಗಳಗೆ ಅನುಕೂಲ ಆಗುವಂತೆ ಬಿಪಿಎಲ್, ಪಡಿತರ ಚೀಟಿಗಳನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಾಯಬಣ್ಣ ಬೋರಬಂಡ್, ವಿಶ್ವನಾಥ ನೀಲಳ್ಳಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅನಸೂಯಾ ಬೋರಬಂಡ್, ಭೀಮರೆಡ್ಡಿ ಉಟ್ಕೂರು, ಪ್ರಭುಲಿಂಗ ವಾರದ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶರಣೀಕ್‌ಕುಮಾರ ದೋಖಾ, ಭೀಮರಾಯ ಹಯ್ಯಾಳಪ್ಪನೋರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಮರಿಗೌಡ ಹುಲಕಲ್, ಸುರೇಶ ಜೈನ್, ಭೀಮರಾಯ ಠಾಣಗುಂದಿ, ತಾ.ಪಂ. ಸದಸ್ಯರು, ಕಾರ್ಯಕರ್ತರು ಭಾಗವಹಿಸಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.