ನವದೆಹಲಿ (ಪಿಟಿಐ): ಇಂಡಿಯನ್ ಮುಜಾಹಿದೀನ್ (ಐಎಂ) ಸಹ ಸಂಸ್ಥಾಪಕ ಯಾಸಿನ್ ಭಟ್ಕಳನ ಬೆಂಬಲಿಗ ಫಾಸಿ ಮಹಮ್ಮದ್್ ಮೇಲೆ ಕೈದಿಯೊಬ್ಬ ಹಲ್ಲೆ ಮಾಡಿದ ಘಟನೆ ಬಿಗಿ ಭದ್ರತೆಯ ತಿಹಾರ್ ಜೈಲಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಭಯೋತ್ಪಾದಕ ಚಟುವಟಿಕೆ ಆರೋಪದ ಮೇಲೆ ಫಾಸಿ ಮಹಮ್ಮದ್ 2012ರಲ್ಲಿ ಸೌದಿ ಅರೇಬಿಯಾದಿಂದ ಭಾರತಕ್ಕೆ ಹಸ್ತಾಂತರಗೊಂಡಿದ್ದ.
‘ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆ ಅನುಭವಿಸುತ್ತಿರುವ ಸಿಮ್ರಾನ್ ಎಂಬಾತ ಹಲ್ಲೆ ಮಾಡಿದ ಪರಿಣಾಮ ಫಾಸಿ ಮಹಮ್ಮದ್ ಕಾಲಿಗೆ ಗಾಯವಾಗಿದೆ’ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯಲ್ಲಿ ಅಕ್ರಮ ಶಸ್ತ್ರಾಸ್ತ್ರ ಕಾರ್ಖಾನೆ ಸ್ಥಾಪನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಫಾಸಿಯನ್ನು ಶನಿವಾರ ಸ್ಥಳೀಯ ನ್ಯಾಯಾಲಯಕ್ಕೆ ಗಾಲಿ ಕುರ್ಚಿಯಲ್ಲಿ ಕರೆತರಲಾಯಿತು.

ಆಗ ಆತ ಜೈಲಿನಲ್ಲಿ ತನ್ನ ಮೇಲಾದ ಹಲ್ಲೆ ವಿಷಯವನ್ನು ನ್ಯಾಯಾಧೀಶರಿಗೆ ತಿಳಿಸಿದ. ಈ ವಿಷಯವಾಗಿ ವಿವರ ವರದಿ ನೀಡುವಂತೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ದಯಾ ಪ್ರಕಾಶ್ ಜೈಲು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೇ ಫಾಸಿಗೆ ಏಮ್ಸ್ನಲ್ಲಿ ಹೆಚ್ಚಿನ ಚಿಕಿತ್ಸೆ ಕೊಡಿಸಲು ಪೊಲೀಸರಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.