ಬುಧವಾರ, ಏಪ್ರಿಲ್ 21, 2021
33 °C

ಯುಗಾದಿ ದಿನವೇ ರೈತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸಾಲಿಗ್ರಾಮ: ಇಲ್ಲಿಗೆ ಸಮೀಪ ಬೀಚನಹಳ್ಳಿಕೊಪ್ಪಲು ಗ್ರಾಮದ ರೈತರೊಬ್ಬರು ತಮ್ಮ ಜಮೀನಿನಲ್ಲಿ ಯುಗಾದಿ ಹಬ್ಬದ ದಿನವೇ ಮರಕ್ಕೆ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಸೋಮವಾರ ತಡ ರಾತ್ರಿ ನಡೆದಿದೆ. ಬೀಚನಹಳ್ಳಿ ಕೊಪ್ಪಲು ಗ್ರಾಮದ ಕೃಷ್ಣೇಗೌಡ (42) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅವರು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆ ಪಿಎಲ್‌ಡಿ ಬ್ಯಾಂಕ್‌ನಲ್ಲಿ ರೂ 40 ಸಾವಿರ ಸಾಲ ಪಡೆದು ಕೊಂಡಿದ್ದ ಕೃಷ್ಣೇಗೌಡ ಅವರು  ಖಾಸಗಿ ವ್ಯಕ್ತಿಗಳಿಂದಲ್ಲೂ ಕೈಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ. ಇತ್ತೀಚೆಗೆ ಬ್ಯಾಂಕಿನ ಅಧಿಕಾರಿಗಳು ಸಾಲವನ್ನು ಮರುಪಾವತಿ  ಮಾಡುವಂತೆ ಸೂಚನೆ ನೀಡಿದ್ದರು ಎಂದು ಕುಟುಂಬದ ಸದಸ್ಯರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.ಸಾಲದ ಬಾಧೆಯಿಂದ ನರಳುತ್ತಿದ್ದ ಅವರು ಮನೆಯಲ್ಲಿ ಯುಗಾದಿ ಹಬ್ಬವನ್ನು ಆಚರಣೆ ಮಾಡಲು ಹಣದ ತೊಂದರೆ ಎದುರಾದ ಹಿನ್ನೆಲೆಯಲ್ಲಿ ಮನನೊಂದು ಸೋಮವಾರ ತಡ ರಾತ್ರಿ ಕುಟುಂಬದ ಸದಸ್ಯರಿಗೆ ಹೊರ ಹೋಗಿ ಬರುವುದಾಗಿ ಹೇಳಿ ತಮ್ಮ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ವಿಷಯ ತಿಳಿಯುತ್ತಿದ್ದಂತೆ ಶಾಸಕ ಸಾ.ರಾ.ಮಹೇಶ್ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹದೇವ್ ಅವರು ಬೀಚನಹಳ್ಳಿ ಕೊಪ್ಪಲಿಗೆ ಭೇಟಿ ನೀಡಿ ಕೃಷ್ಣೇಗೌಡ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಸರ್ಕಾರದಿಂದ ರೂ 1ಲಕ್ಷ ಪರಿಹಾರ ನೀಡಲಾಗುತ್ತದೆ. ಜತೆಗೆ ಗಂಗಾ ಕಲ್ಯಾಣ ಯಾೀಜನೆಯಡಿ ಜಮೀನಿನಲ್ಲಿ ಕೊಳವೆ ಬಾವಿ ತೆಗೆಸಿ ಕೊಡುವುದಾಗಿ ಶಾಸಕರು ಭರವಸೆ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.