ಭಾನುವಾರ, ಜೂನ್ 20, 2021
20 °C

ಯುಗಾದಿ ಸಂಭ್ರಮಕ್ಕೆ ವಿಶೇಷ ಬಸ್ಸುಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಪರ ಊರಿಗೆ ಪ್ರವಾಸ ಹೋಗುವ ಆಲೋಚನೆಯಲ್ಲಿರುವ ಬೆಂಗಳೂರಿಗರಿಗೆ ಸಿಹಿ ಸುದ್ದಿ! ಇದೇ 22ರಿಂದ 24ರವರೆಗೆ ರಾಜ್ಯದ ವಿವಿಧ ತಾಲ್ಲೂಕು ಕೇಂದ್ರ, ಪ್ರವಾಸಿ ತಾಣಗಳಿಗೆ ತೆರಳಲು ರಾಜ್ಯ ರಸ್ತೆ ಸಾರಿಗೆ ನಿಗಮ 800ಕ್ಕೂ ಹೆಚ್ಚು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಿದೆ.ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ ಮತ್ತು ತಿರುಪತಿ ಮಾರ್ಗದ ವಿಶೇಷ ಬಸ್ಸುಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿವೆ.ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದಲ್ಲಿ ತೆರಳುವ ಬಸ್ಸುಗಳು ಮೈಸೂರು ರಸ್ತೆಯಲ್ಲಿರುವ ಬಸ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿವೆ.ಮಧುರೆ, ಕುಂಭಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್ ಕಡೆ ಹೋಗುವ ಬಸ್ಸುಗಳು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಪ್ರಯಾಣ ಆರಂಭಿಸಲಿವೆ.ಅಲ್ಲದೆ, ಬೆಂಗಳೂರಿನ ಜೆ.ಪಿ. ನಗರ, ಜಯನಗರ 4 ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್, ಮಲ್ಲೇಶ್ವರ 18ನೇ ಅಡ್ಡರಸ್ತೆ, ವಿಜಯನಗರ, ಗಂಗಾನಗರ, ಬನಶಂಕರಿ, ಯಶವಂತಪುರ, ಕೆಂಗೇರಿ ಉಪನಗರಗಳಿಂದ ಪ್ರಯಾಣಿಕರ ಒತ್ತಡ ಆಧರಿಸಿ ವಿವಿಧ ಸ್ಥಳಗಳಿಗೆ ವಿಶೇಷ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗಿರಿ, ಬೀದರ ಕಡೆ ತೆರಳುವ ಮುಂಗಡ ಟಿಕೆಟ್ ಕಾಯ್ದಿರಿಸಿದ ಬಸ್‌ಗಳು ಮೈಸೂರು ರಸ್ತೆಯ ನಿಲ್ದಾಣದಿಂದ ಹೊರಡಲಿವೆ. ಇದೇ ಮಾರ್ಗದಲ್ಲಿ ಸಂಚರಿಸುವ ಟಿಕೆಟ್ ಕಾಯ್ದಿರಿಸದ ಬಸ್‌ಗಳು ಕೆಂಪೇಗೌಡ ನಿಲ್ದಾಣದಿಂದ ಹೊರಡಲಿವೆ.ಪ್ರಯಾಣಿಕರು ನಿಗಮದ ವೆಬ್‌ಸೈಟ್ (www.ksrtc.in)  ಮೂಲಕ ಅಥವಾ ಮೊಬೈಲ್‌ನಿಂದ 56767 ಸಂಖ್ಯೆಗೆ ಎಸ್‌ಎಂಎಸ್ ಕಳಿಸುವ ಮೂಲಕ ಟಿಕೆಟ್ ಕಾಯ್ದಿರಿಸಬಹುದು. ಹೆಚ್ಚಿನ ಮಾಹಿತಿಗಾಗಿ 44554422 ಸಂಖ್ಯೆಗೆ ಕರೆ ಮಾಡಬಹುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.