ಶನಿವಾರ, ನವೆಂಬರ್ 23, 2019
17 °C

ಯುಗಾದಿ: ಹೆಚ್ಚು ಬಸ್ ಸಂಚಾರ

Published:
Updated:

ಬೆಂಗಳೂರು:  ಯುಗಾದಿ ಹಬ್ಬದ ಪ್ರಯುಕ್ತ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಯಾಣಿಕರ ಅನುಕೂಲಕ್ಕಾಗಿ ಬುಧವಾರದಿಂದ (ಏ. 10) ಶನಿವಾರದವರೆಗೆ (ಏ. 13) ನಗರದಿಂದ ರಾಜ್ಯ ಮತ್ತು ಹೊರ ರಾಜ್ಯಗಳ ಹಲವು ಸ್ಥಳಗಳಿಗೆ ಪ್ರತಿ ದಿನ ಸರಾಸರಿ 300 ರಿಂದ 350 ಹೆಚ್ಚುವರಿ ಬಸ್‌ಗಳನ್ನು ಓಡಿಸಲಿದೆ.ನಗರದ ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜೆ.ಪಿ.ನಗರ, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ವಿಜಯನಗರ, ಗಂಗಾನಗರ, ಬನಶಂಕರಿ, ಯಶವಂತಪುರ, ಕೆಂಗೇರಿಯ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.ವಾಯುವ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ, ಶಿರಸಿ, ಕಾರವಾರ ಇತ್ಯಾದಿ) ಹಾಗೂ ಈಶಾನ್ಯ ಕರ್ನಾಟಕದ ಪ್ರದೇಶಗಳ ಕಡೆಗೆ (ಗುಲ್ಬರ್ಗ, ಬಳ್ಳಾರಿ, ರಾಯಚೂರು, ಹೊಸಪೇಟೆ, ಕೊಪ್ಪಳ, ಯಾದಗೀರ್, ಬೀದರ್ ಇತ್ಯಾದಿ) ಕಾರ್ಯಾಚರಣೆಯಾಗುವ ಮುಂಗಡವಾಗಿ ವಾಹನಗಳಲ್ಲಿ ಆಸನಗಳನ್ನು ಕಾಯ್ದಿರಿಸಲಾದ ವಿಶೇಷ ಸಾರಿಗೆಗಳನ್ನು ಮೈಸೂರು ರಸ್ತೆಯ ಸ್ಯಾಟಲೈಟ್  ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು. ಈ ಮಾರ್ಗಗಳಲ್ಲಿ ಕಾರ್ಯಾಚರಿಸುವ ಕಾಯ್ದಿರಿಸದ ವಿಶೇಷ ಸಾರಿಗೆಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಿಂದಲೇ ಕಾರ್ಯಾಚರಣೆ ಮಾಡಲಾಗುವುದು.ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಇ- ಟಿಕೇಟ್ ಬುಕ್ಕಿಂಗ್ ಅನ್ನು www.ksrtc.in ವೆಬ್ ಸೈಟ್ ಮೂಲಕ ಮಾಡಬಹುದಾಗಿದೆ. ಮೊಬೈಲ್ ನಿಂದ 56767 ಸಂಖ್ಯೆಗೆ ಎಸ್‌ಎಂಎಸ್ ಸಂದೇಶ ಕಳುಹಿಸುವ ಮೂಲಕವೂ ಮುಂಗಡ ಟಿಕೇಟುಗಳನ್ನು ಕಾಯ್ದಿರಿಸಬಹುದಾಗಿದೆ.ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ.ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿರ್ಬಂಧ

ಬೆಂಗಳೂರು:
  ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಊರುಗಳಿಗೆ ತೆರಳಲು ಬುಧವಾರ (ಏ.10) ಸಂಜೆ ಹೆಚ್ಚಿನ ಸಂಖ್ಯೆಯಲ್ಲಿ ಮೆಜೆಸ್ಟಿಕ್‌ಗೆ ಬರುವುದರಿಂದ ಮೆಜೆಸ್ಟಿಕ್ ಸುತ್ತಮುತ್ತಲ ಪ್ರದೇಶದಲ್ಲಿ ವಾಹನ ದಟ್ಟಣೆ ಉಂಟಾಗಲಿದ್ದು, ಈ ಕಾರಣಕ್ಕಾಗಿ ಅಕ್ಕಪಕ್ಕದ ರಸ್ತೆಗಳಲ್ಲಿ ವಾಹನ ನಿಲುಗಡೆ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಧನ್ವಂತ್ರಿ ರಸ್ತೆ, ನಗರ ರೈಲು ನಿಲ್ದಾಣ ರಸ್ತೆ, ಟ್ಯಾಂಕ್ ಬಂಡ್ ರಸ್ತೆ, ಪ್ಲಾಟ್‌ಫಾರ್ಮ್ ರಸ್ತೆ, ಸಂಗೊಳ್ಳಿರಾಯಣ್ಣ ವೃತ್ತದ (ಖೋಡೆಸ್ ಜಂಕ್ಷನ್) ಬಳಿ ವಾಹನ ನಿಲುಗಡೆಗೆ ಅವಕಾಶವಿಲ್ಲ. ಮೈಸೂರು, ಕೊಡಗು ಹಾಗೂ ಕೇರಳಕ್ಕೆ ಹೋಗುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳು ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ ಹೊರಡಲಿವೆ. ತಮಿಳುನಾಡು ಮತ್ತು ದಾವಣಗೆರೆ ಕಡೆಗೆ ಹೋಗುವ ಬಸ್‌ಗಳು ಕ್ರಮವಾಗಿ ಶಾಂತಿನಗರ ಬಸ್ ನಿಲ್ದಾಣ ಹಾಗೂ ಚಿಕ್ಕಲಾಲ್‌ಬಾಗ್ ನಿಲ್ದಾಣದಿಂದ ಹೊರಡಲಿವೆ.ಶಿವಮೊಗ್ಗ ಕಡೆಗೆ ಸಂಚರಿಸುವ ಬಸ್‌ಗಳು ಯಶವಂತಪುರ ಸಂಚಾರ ಮತ್ತು ಸಾಗಣೆ ನಿರ್ವಹಣಾ ಕೇಂದ್ರದಿಂದ (ಟಿಟಿಎಂಸಿ) ಹೊರಡಲಿವೆ.  ನಗರ ರೈಲು ನಿಲ್ದಾಣ ಹಾಗೂ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಬರುವ ಸಾರ್ವಜನಿಕರು ಸಾಧ್ಯವಾದಷ್ಟು ಬಿಎಂಟಿಸಿ ಬಸ್ ಅಥವಾ ಆಟೊಗಳಲ್ಲಿ ಸಂಚರಿಸಬೇಕು.ಕೆಂಪೇಗೌಡ ರಸ್ತೆ, ಗೂಡ್‌ಶೆಡ್ ರಸ್ತೆ, ಶೇಷಾದ್ರಿ ರಸ್ತೆ, ಸುಬೇದಾರ್ ಛತ್ರಂ ರಸ್ತೆ, ಪ್ಲಾಟ್  ಫಾರ್ಮ್ ರಸ್ತೆ, ಕೃಷ್ಣ ಫ್ಲೋರ್ ಮಿಲ್ ರಸ್ತೆಯಲ್ಲಿ ಬುಧವಾರ ಸಂಜೆ ನಾಲ್ಕು ಗಂಟೆಯಿಂದ ರಾತ್ರಿ 11ರವರೆಗೆ ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಪರ್ಯಾಯ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.                                              ಹೆಚ್ಚುವರಿ ಬಸ್ ಸಂಚಾರ

ಕೆಂಪೇಗೌಡ ಬಸ್ ನಿಲ್ದಾಣ


ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಾಪುರ, ಗೋಕರ್ಣ,  ಶಿರಸಿ, ಕಾರವಾರ, ರಾಯಚೂರು, ಗುಲ್ಬರ್ಗ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ.ಸ್ಯಾಟಲೈಟ್ ಬಸ್ ನಿಲ್ದಾಣ

ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣ

ತಮಿಳುನಾಡಿನ ಮದುರೆ, ಕುಂಬಕೋಣಂ, ತಿರುಚಿ, ಚೆನ್ನೈ, ಕೊಯಮತ್ತೂರು, ಆಂಧ್ರಪ್ರದೇಶದ ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳು

ಪ್ರತಿಕ್ರಿಯಿಸಿ (+)