ಮಂಗಳವಾರ, ಮೇ 24, 2022
30 °C

`ಯುಡಿಆರ್‌ಎಸ್‌ಗೆ ಇತರ ಕ್ರಿಕೆಟ್ ಸಂಸ್ಥೆಗಳ ವಿರೋಧ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): `ಅಂಪೈರ್ ತೀರ್ಪು ಪರಿಶೀಲನಾ ಪದ್ಧತಿಯನ್ನು (ಯುಡಿಆರ್‌ಎಸ್) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮಾತ್ರ ವಿರೋಧಿಸುತ್ತಿಲ್ಲ. ಬೇರೆ ದೇಶಗಳ ಕ್ರಿಕೆಟ್ ಮಂಡಳಿಗಳೂ ಇದಕ್ಕೆ ವಿರೋಧ ವ್ಯಕ್ತಪಡಿಸಿವೆ' ಎಂದು ಬಿಸಿಸಿಐ ಮೂಲಗಳು ಹೇಳಿವೆ.ಲಂಡನ್‌ನಲ್ಲಿ ನಡೆದ ಐಸಿಸಿ ವಾರ್ಷಿಕ ಸಭೆಯಲ್ಲಿ ಬೇರೆ ಕ್ರಿಕೆಟ್ ಸಂಸ್ಥೆಗಳೂ ವಿರೋಧ ವ್ಯಕ್ತಪಡಿಸಿದ್ದಾಗಿ ಬಿಸಿಸಿಐ ಹೇಳಿದೆ. `ಯುಡಿಆರ್‌ಎಸ್‌ಗೆ ಮೊದಲು ಭಾರತ ಬಹಿರಂಗವಾಗಿಯೇ ವಿರೋಧ ವ್ಯಕ್ತಪಡಿಸಿತ್ತು. ಆದರೆ, ಈಗ ಬೇರೆ ಕ್ರಿಕೆಟ್ ಮಂಡಳಿಗಳೂ ಇದೇ ಅಭಿಪ್ರಾಯ ಹೊಂದಿವೆ' ಎಂದೂ ಬಿಸಿಸಿಐ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.