ಭಾನುವಾರ, ಜೂನ್ 13, 2021
21 °C

ಯುನೆಸ್ಕೊ ಸಮಿತಿಗೆ ತಜ್ಞರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತದ ಸಾಂಸ್ಕೃತಿಕ ಪರಂಪರೆ ಮತ್ತು ಸಾಂಸ್ಕೃತಿಕ ಪದ್ಧತಿಗಳನ್ನು ಸಂರಕ್ಷಿಸಲು ಯುನೆಸ್ಕೊ ಮಾರ್ಗದರ್ಶನದಲ್ಲಿ ಕೇಂದ್ರ ಸಂಸ್ಕೃತಿ ಸಚಿವಾಲಯ ಮತ್ತು ಕೇಂದ್ರ ಸಂಗೀತ ನಾಟಕ ಅಕಾಡೆಮಿ ರಚಿಸಿರುವ ತಜ್ಞರ ಸಲಹಾ ಸಮಿತಿಯ ಸದಸ್ಯರಾಗಿ ಅಖಿಲ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗೊ.ರು.ಚನ್ನಬಸಪ್ಪ, ರಾಜ್ಯ ಯಕ್ಷಗಾನ ಬಯಲಾಟ ಅಕಾಡೆಮಿಯ ಅಧ್ಯಕ್ಷ ಬೆಳಗಲ್‌ ವೀರಣ್ಣ ಮತ್ತು ಕವಿ ಎಚ್‌.ಎಸ್‌.ಶಿವಪ್ರಕಾಶ್‌ ಆಯ್ಕೆ ಯಾಗಿದ್ದಾರೆ.ನವದೆಹಲಿಯ ಹಿರಿಯ ರಂಗತಜ್ಞ ಬನ್ಸಿ ಕೌಲ್‌ ಅವರು ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಕಾರ್ಯದರ್ಶಿ­ಯಾಗಿರುವ ಹೆಲೆನ್‌ ಆಚಾರ್ಯ ಅವರೇ ಈ ಸಮಿತಿಗೂ ಕಾರ್ಯದರ್ಶಿ­ಯಾಗಿದ್ದಾರೆ.ಎರಡು ವರ್ಷಗಳ ಅವಧಿಯ ಸಮಿತಿಯು ದೇಶದ ಸಾಂಸ್ಕೃತಿಕ ಪರಂಪರೆ ಮತ್ತು ಪದ್ಧತಿಗಳ ಸಂರಕ್ಷಣೆಗೆ ಸಂಬಂಧಿಸಿದ ಯೋಜನೆಗಳನ್ನು ಪರಿಶೀಲಿಸಿ, ಅವುಗಳ ಅನುಷ್ಠಾನಕ್ಕೆ ಅಗತ್ಯ ಶಿಫಾರಸು ಮಾಡಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.