ಮಂಗಳವಾರ, ಮೇ 24, 2022
30 °C

ಯುಪಿಎ ವಿರುದ್ಧ ಟಿಎಂಸಿ ಟೀಕಾಸ್ತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಲ್ಲಿದ್ದಲು ನಿಕ್ಷೇಪಗಳ ಮಂಜೂರಾತಿಯಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಗಳ ಕೋರಿಕೆಯನ್ನು ತಿರಸ್ಕರಿಸುವ ಜತೆಗೆ ಖಾಸಗಿ ಕಂಪೆನಿಗಳಿಗೆ ಮಣೆ ಹಾಕಿದ ಸರ್ಕಾರದ ಕ್ರಮವನ್ನು ಯುಪಿಎ ಮಿತ್ರಪಕ್ಷವಾದ ತೃಣಮೂಲ ಕಾಂಗ್ರೆಸ್ ಕಟುವಾಗಿ (ಟಿಎಂಸಿ) ಟೀಕಿಸಿದೆ.ಕಾಂಗ್ರೆಸ್ ಪಕ್ಷವು ಈ ಸಂಬಂಧದ ಆರೋಪಗಳನ್ನು ಅಲ್ಲಗಳೆದು, ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಸಮರ್ಥಿಸಿಕೊಂಡ ಮರುದಿನವೇ ಟಿಎಂಸಿ ಟೀಕಾಸ್ತ್ರವನ್ನು ಪ್ರಯೋಗಿಸಿದೆ.ಸರ್ಕಾರಿ ಸ್ವಾಮ್ಯದ ಕೋಲ್ ಇಂಡಿಯಾ ನಿಯಮಿತ ಮತ್ತು ಭಾರತೀಯ ಉಕ್ಕು ಪ್ರಾಧಿಕಾರಗಳು ಕಲ್ಲಿದ್ದಲು ನಿಕ್ಷೇಪಗಳ ಮಂಜೂರಾತಿ ಕೋರಿದ್ದವು.ಆದರೂ ಸರ್ಕಾರ ನಿಕ್ಷೇಪಗಳನ್ನು ಖಾಸಗಿ ಕಂಪನಿಗಳಿಗೆ ಮಂಜೂರು ಮಾಡಿತ್ತು ಎಂದು ಟಿಎಂಸಿ ಸಂಸದರೂ ಆದ ಸಂಸದೀಯ ಸಮಿತಿಯ ಮುಖ್ಯಸ್ಥ ಕಲ್ಯಾಣ್ ಬ್ಯಾನರ್ಜಿ ಅವರು ಖಾಸಗಿ ವಾಹಿನಿಯೊಂದರಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.