ದೇವನಹಳ್ಳಿ: ‘ಯುಪಿಎ ಸರ್ಕಾರ ಕಳೆದ ಒಂದು ವರ್ಷದಲ್ಲಿ ನಿರೀಕ್ಷೆಗಿಂತ ಹೆಚ್ಚು ಪ್ರಗತಿ ಪರ ಯೋಜನೆಗಳನ್ನು ಜಾರಿಗೊಳಿಸಿದೆ’ ಎಂದು ಕೇಂದ್ರ ಇಂಧನ ಸಚಿವ ವೀರಪ್ಪ ಮೊಯಿಲಿ ತಿಳಿಸಿದರು.

ತಾಲ್ಲೂಕಿನ ಕನ್ನಮಂಗಲ ಗ್ರಾಮದ ಕೆರೆಯ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ‘ಕನ್ನಮಂಗಲ ಕೆರೆ ಅಭಿವೃದ್ಧಿ ಸೇರಿದಂತೆ ಒಟ್ಟು ಹತ್ತು ಕೆರೆಗಳಲ್ಲಿ ಹೂಳು ತೆಗೆಯಲು ಒಂದು ಕೋಟಿ ರೂಪಾಯಿ ಬಿಡುಗಡೆಯಾಗಿದೆ.

ಜೊತೆಗೆ ಅರಸನಹಳ್ಳಿ, ನರಗನಹಳ್ಳಿ, ಸಾದಹಳ್ಳಿ, ಕನ್ನಮಂಗಲ, ಚಿಕ್ಕಸಣ್ಣೆ, ಯರ್ತಿಗಾನಹಳ್ಳಿ ಸೋಲೂರು ಗ್ರಾಮಗಳಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ರೂ 50 ಲಕ್ಷ ಅನುದಾನ ಬಿಡುಗಡೆಯಾಗಿದೆ’ ಎಂದು ತಿಳಿಸಿದರು.

ಉದ್ಘಾಟನೆ: ರೈಲ್ವೆ ಕಚೇರಿ ಕೇಂದ್ರ ಹಾಗೂ ಗಣಕೀಕೃತ ರೈಲ್ವೆ ಪ್ರಯಾಣದ ಟಿಕೆಟ್ ಕಾಯ್ದಿರಿಸುವಿಕೆ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಮೊಯಿಲಿ, ‘ಒಂಬತ್ತು ತಿಂಗಳಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೈಲು ಕಚೇರಿಗಳನ್ನು ಆದರ್ಶ ರೈಲ್ವೆ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದೆ’ ಎಂದು ತಿಳಿಸಿದರು.

ಶಾಸಕ ಪಿಳ್ಳಮುನಿಶಾಮಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಎಲ್ಲರೂ ಪಕ್ಷಾತೀತವಾಗಿ ಸಹಕರಿಸಬೇಕು ಎಂದು ಮನವಿ ಮಾಡಿದರು.

‘ವಿಮಾನ ನಿಲ್ದಾಣದ ಸಮೀಪದಲ್ಲಿರುವ ಕೌಶಲ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಿ ಒಂಬತ್ತು ತಿಂಗಳಾದರೂ ತರಗತಿ ಆರಂಭಗೊಂಡಿಲ್ಲ. ಈ ಕುರಿತು ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.

ಮಾಜಿ ಶಾಸಕ ವೆಂಕಟಸ್ವಾಮಿ, ತಾ.ಪಂ ಮಾಜಿ ಅಧ್ಯಕ್ಷ ಚಂದ್ರಪ್ಪ, ಬಮುಲ್ ನಿರ್ದೇಶಕ ಸೋಮಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ್ ಮತ್ತು ಲಕ್ಷ್ಮೀನಾರಾಯಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನರಸಿಂಹನಾಯಕ್, ಪರಿಶಿಷ್ಟ ಘಟಕದ ಅಧ್ಯಕ್ಷ ಚಿನ್ನಪ್ಪ, ತಾಲ್ಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ನಾಗೇಶ್, ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್, ತಾ.ಪಂ ಮಾಜಿ ಅಧ್ಯಕ್ಷ ಎಸ್.ಜಿ. ನಾರಾಯಣಸ್ವಾಮಿ, ಕೆ.ಸಿ.ಮಂಜುನಾಥ್, ಟಿ.ಮಂಜುನಾಥ್, ಖಾದಿ ಬೋರ್ಡ್ ಮಾಜಿ ಅಧ್ಯಕ್ಷ ಪಟಾಲಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ಎಸ್.ಸಿ.ಚಂದ್ರಪ್ಪ, ಹಿಂದುಳಿದ ವರ್ಗದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೋದಂಡರಾಮಯ್ಯ, ಕುಂದಾಣ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಅಪ್ಪಣ್ಣ, ಲಕ್ಷ್ಮೀನರಸಿಂಹಸ್ವಾಮಿ, ಆವತಿ ವೆಂಕಟೇಶ್, ಕೃಷಿಕ ಸಮಾಜದ ಅಧ್ಯಕ್ಷ ರವಿಕುಮಾರ್, ಎಂ.ಪಿ.ಸಿ.ಎಸ್ ಅಧ್ಯಕ್ಷ ಶ್ರೀರಾಮಯ್ಯ, ಪುರಸಭೆ ಸದಸ್ಯೆ ಶಾರದಮ್ಮ ಇದ್ದರು.

ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ವಿಜಯಪುರ: ‘ದೇವನಹಳ್ಳಿ ಹಾಗೂ ವಿಜಯಪುರ ಕೆರೆಗಳಿಗೆ ಎತ್ತಿನ ಹೊಳೆ ನೀರು ಹರಿಯುವುದು ಖಚಿತ’ ಎಂದು ವೀರಪ್ಪ ಮೊಯಿಲಿ ತಿಳಿಸಿದರು. ಸಮೀ ಪದ ಎ.ರಂಗನಾಥಪುರದಲ್ಲಿ ₨ ೫ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

‘ಎತ್ತಿನಹೊಳೆ ಯೋಜನೆಯಿಂದ 24 ಟಿಎಂಸಿ ನೀರು ದೊರೆಯುತ್ತದೆ. ತುಮಕೂರು, ಬೆಂಗಳೂರು ಗ್ರಾಮಾಂ ತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ನೀರು ಹರಿಸಲಾಗುವುದು. ಇದರಲ್ಲಿ ಗೊಂದಲ ಬೇಡ’ ಎಂದು ತಿಳಿಸಿದರು.

ಸ್ಪಷ್ಟನೆ: ‘-ಬೆಂ.ಗ್ರಾ. ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಬಿ.ರಾಜಣ್ಣ ಬಿಜೆಪಿಗೆ ಹೋಗುತ್ತಾರೆ ಎಂಬ ವದಂತಿಗೆ ತೆರೆ ಎಳೆದ ಮೊಯಿಲಿ ಅವರು ರಾಜಣ್ಣ ಕಾಂಗ್ರೆಸ್ಸಿನಲ್ಲಿಯೇ ಮುಂದುವರೆಯುತ್ತಾರೆ’ ಎಂದು ಸ್ಪಷ್ಟಪಡಿಸಿದರು. ಮಾಜಿ ಶಾಸಕ ವೆಂಕಟಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ದೇವನ ಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗನ್ನಾಥ್, ಜಿಲ್ಲಾ ಕಾರ್ಯದರ್ಶಿ ನರಸಿಂಹ ನಾಯಕ್, ಜಿಲ್ಲಾ ಎಸ್ಟಿ ಘಟಕದ ಅಧ್ಯಕ್ಷ ಚಿನ್ನಪ್ಪ, ಗೊಡ್ಲು ಮುದ್ದೇನಹಳ್ಳಿ ಗ್ರಾ.ಪಂ. ಅಧ್ಯಕ್ಷ ಚೇತನ್ ಗೌಡ, ಮಾಜಿ ಉಪಾಧ್ಯಕ್ಷ ರಾಮಚಂದ್ರಪ್ಪ, ಹಾರೋಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಚಂದ್ರಪ್ಪ, ವೆಂಕಟಗಿರಿ ಕೋಟೆ ಪಂಚಾಯ್ತಿ ಸದಸ್ಯ ಸಜ್ಜದ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.