ಸೋಮವಾರ, ನವೆಂಬರ್ 18, 2019
23 °C

ಯುವಕರಿಗೆ ಟಿಕೆಟ್-ಎಚ್‌ಡಿಕೆ

Published:
Updated:

ಮಧುಗಿರಿ: ಯಾರಿಗೂ ಟಿಕೆಟ್ ಘೋಷಿಸಿಲ್ಲ. ಏಪ್ರಿಲ್ 4ರ ನಂತರ ನಿರ್ಧಾರ ಪ್ರಕಟಿಸಲಾಗುವುದು. ಈ ಸಂದರ್ಭ ಯುವಕರನ್ನು ಪರಿಗಣಿಸಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪಕ್ಷದ ಕಾರ್ಯಕರ್ತರಿಗೆ ಮಂಗಳವಾರ ಭರವಸೆ ನೀಡಿದರು.ಪಟ್ಟಣದಿಂದ ವಾಹನಗಳಲ್ಲಿ ಕಾರ್ಯಕರ್ತರು ಬೆಂಗಳೂರಿಗೆ ತೆರಳಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ಚಲನಚಿತ್ರ ನಿರ್ಮಾಪಕ ಸತ್ಯಪ್ರಕಾಶ್‌ಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಿ ಎಂದು ಒತ್ತಾಯಿಸಿದರು.ಈ ಸಂದರ್ಭ ಮಾತನಾಡಿದ ಕುಮಾರಸ್ವಾಮಿ ಕಾರ್ಯಕರ್ತರು ಧೃತಿಗೆಡದಿರಿ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲು ಅವಕಾಶ ನೀಡುವುದಿಲ್ಲ ಎಂದು ಸಮಾಧಾನದ ಮಾತುಗಳನ್ನಾಡಿ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಬೆಂಗಳೂರಿಗೆ ತೆರಳಿದ್ದ ಕಾರ್ಯಕರ್ತರು ತಿಳಿಸಿದ್ದಾರೆ.ನಿಯೋಗದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು ಸೇರಿದಂತೆ ಜೆಡಿಎಸ್ ಪ್ರಮುಖ ಮುಖಂಡರು ತೆರಳಿದ್ದು, ಜೆಡಿಎಸ್ ವಲಯದಲ್ಲಿ ರಾಜಕೀಯ ಚಟುವಟಿಕೆಗಳು ಸೋಮವಾರದಿಂದ ತೀವ್ರಗೊಂಡಿವೆ.ಜೆಡಿಯು ಟಿಕೆಟ್‌ಗೆ ಆಗ್ರಹ

ತುಮಕೂರು: ಚಿಕ್ಕನಾಯಕನಹಳ್ಳಿ ಕ್ಷೇತ್ರದಿಂದ ದೊರೆರಾಜು ಗಾಣದಾಳ ಅವರಿಗೆ ಜೆಡಿಯು ಟಿಕೆಟ್ ನೀಡಬೇಕುಎಂದು ದಲಿತಪರ ಸಂಘಟನೆಗಳ ಒಕ್ಕೂಟದ ತಾಲ್ಲೂಕು ಅಧ್ಯಕ್ಷ ಮಾದೇನಹಳ್ಳಿ ದುರ್ಗೇಶ್ ಒತ್ತಾಯಿಸಿದ್ದಾರೆ.

ಪ್ರತಿಕ್ರಿಯಿಸಿ (+)