ಸೋಮವಾರ, ಅಕ್ಟೋಬರ್ 21, 2019
25 °C

ಯುವಕರು ನಾಯಕತ್ವ ಗುಣ ಮೈಗೂಡಿಸಿಕೊಳ್ಳಲು ಕರೆ

Published:
Updated:

ಕೊಳ್ಳೇಗಾಲ: ಯುವಕರು ಸಂಘಟಿತ ರಾಗಿ ನಾಯಕತ್ವಗುಣ ಮೈಗೂಡಿಸಿ ಕೊಳ್ಳುವ ಜೊತೆಗೆ ಗ್ರಾಮಗಳ ಅಭಿವೃದ್ಧಿಯತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಂಸದ ಆರ್. ಧ್ರುವನಾರಾಯಣ ಕರೆ ನೀಡಿದರು.ತಾಲ್ಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ಭಾನುವಾರ ಸಂತ ಅನ್ನಮಾತೆ ಯುವಕರ ಸಂಘದ ವತಿಯಿಂದ ಭಾನುವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.ಶಾಸಕ ಆರ್.ನರೇಂದ್ರ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಪೀಳಿಗೆ ಪಟ್ಟಣದತ್ತ ಮುಖ ಮಾಡುತ್ತಿದ್ದು, ಗ್ರಾಮದಲ್ಲಿ ಸಂಘ ರಚನೆ ಮಾಡಿ ಗ್ರಾಮದ ಅಭಿವೃದ್ಧಿಗೆ ಯುವಕರು ಮುಂದಾಗಿರುವುದು ಆರೋಗ್ಯಕರ ಬೆಳವಣಿಗೆ ಎಂದ ಅವರು, ಯುವಕರು ಸರ್ಕಾರದ ಯೋಜನೆಗಳ ಸಮರ್ಪಕ ಅನುಷ್ಠಾನದ ಬಗ್ಗೆ ಜನತೆಯಲ್ಲಿ ಅರಿವು ಮೂಡಿಸಬೇಕು ಎಂದರು.ಯುವಕರು ಗ್ರಾಮಗಳಲ್ಲಿ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಹಾಗೂ ಜನತೆಗೆ ಉತ್ತಮ ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವಂತೆ ಅರಿವು ಮೂಡಿಸಬೇಕು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು.ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಮಹಾದೇವಸ್ವಾಮಿ, ಕೆಪಿಸಿಸಿ ಸದಸ್ಯ ಬಸವರಾಜು, ಜಿ.ಪಂ. ಮಾಜಿ ಸದಸ್ಯ ಎಸ್.ಶಿವಕುಮಾರ್, ಮಾರ್ಟಳ್ಳಿ ಚರ್ಚ್ ಫಾದರ್ ಫ್ರಾಂಕ್ಲಿನ್, ಸಹಗುರು ನಿರ್ಮಲ್‌ರಾಜ್, ಸಂತ ಅನ್ನಮಾತೆ ಯುವಕರ ಸಂಘದ ಅಧ್ಯಕ್ಷ ಜಾನ್‌ಮರಿಯ ವಿಯಾನಿ, ಕಾರ್ಯದರ್ಶಿ ಪೆರಿಯನಾಯಗಂ, ಖಜಾಂಚಿ ಗಿಲ್ಬರ್ಟ್, ವಿಲಿಯಂ ಸೆಲ್ವಕುಮಾರ್, ಜಯಪಾಲ್ ಇತರೆ ಮುಖಂಡರು ಉಪಸ್ಥಿತರಿದ್ದರು.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)